Urdu   /   English   /   Nawayathi

ರಾಷ್ಟ್ರಪತಿ ಕೋವಿಂದ್ ಅವರಿಂದ 16ನೇ ಲೋಕಸಭೆ ವಿಸರ್ಜನೆ: ತಕ್ಷಣದಿಂದಲೇ ಜಾರಿ

share with us

ನವದೆಹಲಿ: 25 ಮೇ 2019 (ಫಿಕ್ರೋಖಬರ್ ಸುದ್ದಿ) ಲೋಕಸಭಾ ಚುನಾವಣೆ ಮುಗಿದ ನಂತರ ಹೊಸ ಸರ್ಕಾರ ರಚನೆಯ ಪ್ರಕ್ರಿಯೆಗಳು ನಡೆಯುತ್ತಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್  ತಕ್ಷಣದಿಂದಲೇ ಜಾರಿಗೆ ಬರುವಂತ 16ನೇ ಲೋಕಸಭೆಯನ್ನು ವಿಸರ್ಜಿಸಿರುವುದಾಗಿ ರಾಷ್ಚ್ಪಪತಿ ಭವನ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ  16ನೇ ಲೋಕಸಭೆ ವಿಸರ್ಜನೆಗೆ ಕೇಂದ್ರ ಸಚಿವ ಸಂಪುಟ ನಿರ್ಣಯ ಅಂಗೀಕರಿಸಿತ್ತು. ಕೋವಿಂದ್ ಅವರು ಮೋದಿ ಸಂಪುಟ ಸಭೆಯ ನಿರ್ಣಯವನ್ನು ಅಂಗೀಕರಿಸಿ, ಲೋಕಸಭೆಯನ್ನು ವಿಸರ್ಜಿಸಿದ್ದಾರೆ. ಈ ರಾಜೀನಾಮೆಯನ್ನು ಅಂಗೀಕರಿಸಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್,  ಹೊಸ ಸರ್ಕಾರ ರಚನೆಯಾಗುವರೆಗೂ ನೀವೆ ಮುಂದುವರೆಯುವಂತೆ ಮೋದಿಗೆ ಸೂಚಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳಿಂದ ತಿಳಿದುಬಂದಿದೆ. ಮೇ 30 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎರಡನೇ ಬಾರಿಗೆ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಇದೆ. ಈ ಮಧ್ಯೆ  ಮೇ 25 ರಂದು ಎನ್ ಡಿಎ ಸಭೆ ನಡೆಯಲಿದೆ. ಈ ಸಭೆಯಲ್ಲಿ  ಎನ್ ಡಿಎ ಮೈತ್ರಿಕೂಟದ ನೂತನ ಸಂಸದರು ಔಪಚಾರಿಕವಾಗಿ ಮೋದಿ ಅವರನ್ನು ನಾಯಕನಾಗಿ ಆಯ್ಕೆ ಮಾಡಲಿದ್ದಾರೆ ನಂತರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸರ್ಕಾರ ರಚನೆಗೆ ಮೋದಿ ಅವರನ್ನು ಆಹ್ವಾನಿಸಲಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا