Urdu   /   English   /   Nawayathi

ಇಮ್ರಾನ್ ಖಾನ್ ಅವರನ್ನು ಆಹ್ವಾನಿಸದಿರುವುದು ಭಾರತದ ಆಂತರಿಕ ವಿಷಯ: ಪಾಕಿಸ್ತಾನ

share with us

ಇಸ್ಲಾಮಾಬಾದ್: 28 ಮೇ 2019 (ಫಿಕ್ರೋಖಬರ್ ಸುದ್ದಿ) ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರನ್ನು ಆಹ್ವಾನಿಸದಿರುವುದು ಭಾರತದ ಆಂತರಿಕ ವಿಷಯ ಎಂದು ಪಾಕಿಸ್ತಾನ ಹೇಳಿದೆ. "ಚುನಾವಣಾ ಪ್ರಚಾರ ಅಭಿಯಾನದಲ್ಲಿ ಅವರು (ಮೋದಿ) ಪಾಕಿಸ್ತಾನವನ್ನು ಟೀಕಿಸಿದ್ದರು. ಹೀಗಾಗಿ ಸದ್ಯ ಅವರು ಇಷ್ಟು ಬೇಗ ಅದರಿಂದ ಹೊರಗೆ ಬರುತ್ತಾರೆ ಎಂದು ನಿರೀಕ್ಷಿಸಲಾಗದು" ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾಹ್ ಮಹಮೂದ್ ಕುರೇಶಿ ಅಲ್ಲಿನ ಮಾಧ್ಯಮಕ್ಕೆ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭಕ್ಕೆ ಬಿಮ್ಸ್ ಟೆಕ್ನ ಬಾಂಗ್ಲಾದೇಶ, ಭೂತಾನ್, ನೇಪಾಳ, ಶ್ರೀಲಂಕಾ, ಮ್ಯಾನ್ಮಾರ್ ಹಾಗೂ ಥೈಲ್ಯಾಂಡ್ ದೇಶಗಳ ಪ್ರತಿನಿಧಿಗಳನ್ನು ಭಾರತ ಆಹ್ವಾನಿಸಿದೆ. 2014 ರಲ್ಲಿ ಮೋದಿ ಅವರ ಪ್ರಮಾಣ ವಚನ ಸಮಾರಂಭಕ್ಕೆ ಪಾಕಿಸ್ತಾನವನ್ನು ಕೂಡ ಆಹ್ವಾನಿಸಲಾಗಿತ್ತು. ಆಗಿನ ಪಾಕಿಸ್ತಾನದ ಪ್ರಧಾನ ಮಂತ್ರಿ ನವಾಜ್ ಶರೀಫ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದರೆ, ಈ ಬಾರಿ ನೆರೆಯ ಎಲ್ಲಾ ದೇಶಗಳನ್ನು ಭಾರತ ಆಹ್ವಾನಿಸಿದ್ದು, ಪಾಕಿಸ್ತಾನಕ್ಕೆ ಆಹ್ವಾನ ನೀಡಿಲ್ಲ. ಫೆಬ್ರವರಿ 14ರಂದು ಜಮ್ಮು-ಕಾಶ‍್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಮೇಲೆ ನಡೆಸಿದ ಆತ್ಮಾಹುತಿ ದಾಳಿಯಲ್ಲಿ 40 ಯೋಧರು ಹುತಾತ್ಮರಾದ ನಂತರ ಎರಡೂ ದೇಶಗಳ ನಡುವಿನ ಸಂಬಂಧ ಹದಗೆಟ್ಟು, ಉದ್ವಿಗ್ನತೆ ಸೃಷ್ಟಿಯಾಗಿದೆ.

ಕ, ಪ್ರ ವರದಿ

 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا