Urdu   /   English   /   Nawayathi

ಐಎಂಎ ಸಂಸ್ಥೆಯ ಏಳು ಮಂದಿ ನಿರ್ದೇಶಕರ ಬಂಧನ: ಕಾರು ಜಪ್ತಿ

share with us

ಬೆಂಗಳೂರು: 12 ಜೂನ್ 2019 (ಫಿಕ್ರೋಖಬರ್ ಸುದ್ದಿ) ಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣದ ಬಳಿಕ ಪರಾರಿಯಾಗಿದ್ದ ಸಂಸ್ಥೆಯ ಏಳು ಮಂದಿ ನಿರ್ದೇಶಕರನ್ನು ನಗರ ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಐಎಂಎ ಸಂಸ್ಥೆಯ ನಿರ್ದೇಶಕರಾಗಿರುವ ನಿಜಾಮುದ್ದೀನ್, ನಾಸೀರ್ ಹುಸೇನ್, ನವೀದ್ ಅಹಮದ್, ಆರ್ಷದ್ ಖಾನ್ , ವಾಸೀಂ, ದಾದಾಫೀರ್ ಹಾಗೂ ಅನ್ವರ್ ಪಾಷಾ ಬಂಧಿತರು. ಆರೋಪಿಗಳ ಬಂಧನಕ್ಕೆ ಸಂಬಂಧಿಸಿದಂತೆ ಡಿಸಿಪಿ ರಾಹುಲ್ ಕುಮಾರ್ ಮಾತನಾಡಿ, ಐಎಂಎ ಪ್ರಕರಣ ಸಂಬಂಧ ಕಂಪನಿಯ 7 ನಿರ್ದೇಶಕರನ್ನು ಅರೆಸ್ಟ್ ಮಾಡಿದ್ದೇವೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗುತ್ತದೆ. ಜೊತೆಗೆ ಐಎಂಎ ಮಾಲೀಕರಿಗೆ ಸೇರಿದ 2 ಕಾರುಗಳನ್ನು ಜಪ್ತಿ ಮಾಡಿದ್ದೇವೆ ಎಂದರು. ಹಗರಣದಲ್ಲಿ ಬಂಧಿತ ನಿರ್ದೇಶಕರ ಪಾತ್ರವೇನು? ಹೂಡಿಕೆದಾರರಿಗೆ ವಂಚಿಸಲು ಇವರ ಕೈವಾಡಗಳೇನು? ಸೇರಿದಂತೆ ಇನ್ನಿತರ ಮಾಹಿತಿಗಳ ಬಗ್ಗೆ ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಸದ್ಯಕ್ಕೆ ನ್ಯಾಯಾಲಯ ಕಲಾಪ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಕೋರಮಂಗಲದ ಎನ್​ಜಿವಿ ಬಡಾವಣೆಯಲ್ಲಿರುವ 4ನೇ ಎಸಿಎಂಎಂ ನ್ಯಾಯಾಧೀಶರ ಮನೆಗೆ ಆರೋಪಿಗಳನ್ನು ಹಾಜರುಪಡಿಸಿ ಬಳಿಕ ಪೊಲೀಸ್ ಕಸ್ಟಡಿ ಪಡೆದುಕೊಳ್ಳುವ ಸಾಧ್ಯತೆಯಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا