Urdu   /   English   /   Nawayathi

ಹೊಳೆಗದ್ದೆಯಲ್ಲಿ ಅನಿಲ ಟ್ಯಾಂಕರ್ ಪಲ್ಟಿ

share with us

ಕುಮಟಾ: 12 ಜೂನ್ 2019 (ಫಿಕ್ರೋಖಬರ್ ಸುದ್ದಿ) ತಾಲೂಕಿನ ಹೊಳೆಗದ್ದೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಅನಿಲ ಟ್ಯಾಂಕರ್ ರಸ್ತೆಯಂಚಿನ ಆಳಕ್ಕೆ ಬಿದ್ದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಯಾರಿಗೂ ಪೆಟ್ಟಾಗಿಲ್ಲ. ಭಾರತ್ ಗ್ಯಾಸ್ ಕಂಪನಿಗೆ ಸೇರಿದ ಟ್ಯಾಂಕರ್ ಖಾಲಿ ಇದ್ದು, ಮಂಗಳೂರಿಗೆ ಸಾಗುತ್ತಿತ್ತು ಎನ್ನಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿಶಾಮಕ ದಳದವರು ಪರಿಶೀಲಿಸಿದ್ದಾರೆ. ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا