Urdu   /   English   /   Nawayathi

ಬೆಂಗಳೂರು: ಬಹು ಚರ್ಚಿತ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಕೈಬಿಟ್ಟ ರಾಜ್ಯ ಸರ್ಕಾರ

share with us

ಬೆಂಗಳೂರು: 18 ಜೂನ್ 2019 (ಫಿಕ್ರೋಖಬರ್ ಸುದ್ದಿ) ಹಲವರ ವಿರೋಧ, ವಿವಾದಗಳಿಂಡಲೇ ಸುದ್ದಿಯಾಗಿದ್ದ ಬೆಂಗಳೂರು ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ರಾಜ್ಯದ ಸಮ್ಮಿಶ್ರ ಸರ್ಕಾರ ಕಡೆಗೂ ಕೈಬಿಟ್ಟಿದೆ.ಕರ್ನಾಟಕ ಹೈಕೋರ್ಟ್‌ಗೆ ಮಂಗಳವಾರ ಈ ಸಂಬಂಧ ಪ್ರಮಾಣಪತ್ರ ಸಲ್ಲಿಸಿರುವ ಸರ್ಕಾರ ಉಕ್ಕಿನ ಸೇತುವೆ ನಿರ್ಮಾಣ ಯೋಜನೆಯಿಂದ ಹಿಂದೆ ಸರಿಯುವುದಾಗಿ ಹೇಳಿದೆ. ಮೂರು ವರ್ಷಗಳ ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನ ಬಸವೇಶ್ವರ ವೃತ್ತ-ಹೆಬ್ಬಾಳ ನಡುವೆ ಉಕ್ಕಿನ ಸೇತುವೆ ನಿರ್ಮಾಣ ಮಾಡಲು ಯೋಜನೆ ತಯಾರಿಸಲಾಗಿತ್ತು. ಆದರೆ ಈ ಯೋಜನೆ ಕಾರಣ ನಗರದಲ್ಲಿ ನೂರಾರು ಮರಗಳು ನಾಶವಾಗಲಿದೆ, ಹಾಗೆಯೇ ಈ ಯೋಜನೆ ಜಾರಿಯಿಂಡ ನಾಗರಿಕರಿಗೆ ಅನುಕೂಲವಾಗುವುದಕ್ಕಿಂತ ಹಾನಿಯೇ ಹೆಚ್ಚಾಗಲಿದೆ ಎಂದು  ವಿಜ್ಞಾನಿಗಳು, ಪರಿಸರವಾದಿಗಳು ಸೇರಿ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಯೋಜನೆ ಜಾರಿ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹಾಗೂ ನ್ಯಾಯಾಲಯದ ಮೊರೆ ಹೋಗಲಾಗಿತ್ತು. ಇಷ್ತಾದರೂ ಸಿದ್ದರಾಮಯ್ಯ ಸರ್ಕಾರದ ಈ ಯೋಜನೆಗೆ ಕಳೆದ ವರ್ಷ ಅಧಿಕಾರಕ್ಕೆ ಬಂದ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಸಹ ಸದ್ದಿಲ್ಲದೆ ಅನುಮೋದನೆ ನೀಡಿತ್ತು. ಆದರೆ ಇಂದು ಸರ್ಕಾರ ಅಂತಿಮವಾಗಿ ತಾನು ಬಹುಕೋಟಿ ವೆಚ್ಚದ ಈ ಯೋಜನೆ ಜಾರಿಯಿಂದ ಹಿಂದೆ ಸರಿಯುವುದಾಗಿ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದೆ. ಇದರಿಂದಾಗಿ ಪರಿಸರವಾದಿಗಳು ಹಾಗೂ ಸಾರ್ವಜನಿಕರ ಹೋರಾಟಕ್ಕೆ ಜಯ ಲಭಿಸಿದಂತಾಗಿದೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا