Urdu   /   English   /   Nawayathi

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ಕೊಲೆ!

share with us

ಬೆಂಗಳೂರು: 18 ಜೂನ್ 2019 (ಫಿಕ್ರೋಖಬರ್ ಸುದ್ದಿ) ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ಹತ್ಯೆಯಾಗಿದ್ದು, ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು 31 ವರ್ಷದ ವ್ಯಕ್ತಿಯನ್ನು ಹತ್ಯೆಗೈದು ಪರಾರಿಯಾಗಿದ್ದಾರೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಕೃತ್ಯ ನಡೆದಿದ್ದು, ಮೃತ ವ್ಯಕ್ತಿಯನ್ನು 31 ವರ್ಷದ ಗಣೇಶ್ ಎಂದು ಗುರುತಿಸಲಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಗಣೇಶ್ ಮೂಲತಃ ಬೆಂಗಳೂರಿನವರೇ ಆಗಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದರು, ಕಳೆದ ಕೆಲವು ದಿನಗಳ ಹಿಂದೆ ವ್ಯಕ್ತಿಯೊಬ್ಬರ ಜೊತೆ ಜಗಳ ಮಾಡಿಕೊಂಡಿದ್ದರು. ಅವರೇ ಈ ಕೃತ್ಯ ಎಸಗಿರಬಹುದು ಎಂದು ಅಂದಾಜಿಸಲಾಗಿದೆ. ರಾತ್ರಿ ಫುಟ್‌ಪಾತ್ ಮೇಲೆ ನಡೆದುಕೊಂಡು ಬರುವ ವೇಳೆ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಗಣೇಶ್ ನನ್ನು ಕೊಲೆ ಮಾಡಿದ್ದಾರೆ. ಕೊಲೆಗೆ ನಿಜವಾದ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ವೈಯಾಲಿಕಾವಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ANI@ANI

Bengaluru: 31-year-old man murdered by three bike-borne assailants in Malleshwaram early morning today; case registered.

83

8:28 AM - Jun 18, 2019

Twitter Ads info and privacy

23 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا