Urdu   /   English   /   Nawayathi

ಬಹುಮಹಡಿ ಕಟ್ಟಡದಲ್ಲಿ ಬೆಂಕಿ: ಉಸಿರುಗಟ್ಟಿ 15 ಮಂದಿ ಅಸ್ವಸ್ಥ

share with us

ಮುಂಬೈ: 23 ಜೂನ್ 2019 (ಫಿಕ್ರೋಖಬರ್ ಸುದ್ದಿ) ಬಹು ಅಂತಸ್ತಿನ ಕಟ್ಟಡ ವೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು 9 ಮಹಿಳೆಯರು ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಉಸಿರಾಟದ ತೊಂದರೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇಂದು ಮುಂಜಾನೆ 3.33ರ ಸುಮಾರಿನಲ್ಲಿ ಉಪನಗರ ವಡಾಲಾ(ಇ)ದ ರಾಮ್‍ನಗರದಲ್ಲಿರುವ 21 ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆಯಿಂದಾಗಿ ಅಲ್ಲಿನ 15ಕ್ಕೂ ಹೆಚ್ಚು ಮಂದಿ ಉಸಿರುಗಟ್ಟಿ ಅಸ್ವಸ್ಥರಾಗಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದು, ಪರಿಸ್ಥಿತಿಯನ್ನು ತಹಬಂದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿ 25 ನಿಮಿಷ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಅಸ್ವಸ್ಥಗೊಂಡ ಎಲ್ಲರೂ ಕೆಇಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರೆಲ್ಲೂ ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ (ಸಿಎಮ್‍ಒ) ಡಾ.ಶ್ರೀಕಾಂತ್ ತಿಳಿಸಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا