Urdu   /   English   /   Nawayathi

ಅಡುಗೆ ಅನಿಲ ಸಿಲಿಂಡರ್ ಸ್ಫೋಟ: ಮೂವರು ಗಂಭೀರ

share with us

ಹುಬ್ಬಳ್ಳಿ: 23 ಜೂನ್ 2019 (ಫಿಕ್ರೋಖಬರ್ ಸುದ್ದಿ) ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಬ್ಬಳ್ಳಿಯ ಜೆ.ಪಿ.ನಗರದಲ್ಲಿ ನಡೆದಿದೆ. ಸಿಲಿಂಡರ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಶಬ್ಬಿರ್ ಮುಲ್ಲಾ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು,ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.ಗೋಕುಲ್ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا