Urdu   /   English   /   Nawayathi

ಜಿಲ್ಲಾಧಿಕಾರಿ ಕಚೇರಿಗೆ ಮೀನುಗಾರ ಮಹಿಳೆಯರ ಮುತ್ತಿಗೆ

share with us

ಕಾರವಾರ: 24 ಜೂನ್ 2019 (ಫಿಕ್ರೋಖಬರ್ ಸುದ್ದಿ) ನೂತನ ಮೀನು ಮಾರುಕಟ್ಟೆ ನಿರ್ಮಾಣ ಮಾಡಿಕೊಡುವಂತೆ ಆಗ್ರಹಿಸಿ ಮೀನುಗಾರ ಮಹಿಳೆಯರು ಜಿಲ್ಲಾಧಿಕಾರಿ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನೂತನ ಮೀನು ಮಾರುಕಟ್ಟೆ ಕಾಮಗಾರಿ ಅರ್ಧಕ್ಕೆ ನಿಂತಿದೆ. ತಾತ್ಕಾಲಿಕ ಮೀನು ಮಾರುಕಟ್ಟೆ ಅವ್ಯವಸ್ಥೆಯಿಂದ ಕೂಡಿದೆ. ಮೀನು ಮಾರಾಟಕ್ಕೆ ಪರ್ಯಾಯ ವ್ಯವಸ್ಥೆ ಮಾಡುವ ನಗರಸಭೆ ಭರವಸೆ ಹುಸಿಯಾಗಿದೆ ಎಂದು ಆಕ್ಷೇಪಿಸಿದರು.‌ ಸುಶೀಲಾ ಹರಿಕಂತ್ರ ನೇತೃತ್ವದಲ್ಲಿ ನಗರಸಭೆ ವಿರುದ್ಧ ಘೋಷಣೆ ಕೂಗಿದರು. ಮೀನುಗಾರ ಮುಖಂಡರಾದ ಗಣಪತಿ ಮಾಂಗ್ರೆ, ರಾಜು‌ ತಾಂಡೇಲ, ಚೇತನ ಹರಿಕಂತ್ರ, ಪ್ರವೀಣ ಜಾವ್ಕರ್ ಇತರರು ಬೆಂಬಲ ನೀಡಿದರು. ಮೀನುಗಾರ ಮಹಿಳೆಯರ ಮನವಿ ಆಲಿಸಿದ ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ.’ ೨೭ ರಂದು ಹೈಕೋರ್ಟ್ ನಲ್ಲಿ ಮೀನು ಮಾರುಕಟ್ಟೆ ಸಂಬಂಧ ಆದೇಶ ಬರುವ ನಿರೀಕ್ಷೆ ಇದೆ. ನಂತರ ಸಭೆ ನಡೆಸಿ ಪರ್ಯಾಯ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಮಾತಿನ ಚಕಮಕಿ: ಪ್ರತಿಭಟನೆಗೆ ಬೆಂಬಲ ಸೂಚಿಸಿ ಶಾಸಕಿ ರೂಪಾಲಿ ನಾಯ್ಕ ಮಾಜಿ ಸಚಿವ ಆನಂದ ಅಸ್ನೋಟಿಕರ್, ಮಾಜಿ ಶಾಸಕ ಸತೀಶ ಸೈಲ್ ಆಗಮಿಸಿದ್ದರು. ಸೈಲ್ ಹಾಗೂ ರೂಪಾಲಿ ನಡುವೆ ಪ್ರತಿಭಟನಾ ಸಭೆಯ ನಡುವೆ ಮಾತಿನ ಚಕಮಕಿ ನಡೆಯಿತು. ‘ಮೀನು ಮಾರುಕಟ್ಟೆ ವಿಷಯದಲ್ಲಿ ರಾಜಕೀಯ ನಡೆಯುತ್ತಿದ್ದೆ’ಎಂಬ ಶಾಸಕಿ ರೂಪಾಲಿ ನಾಯ್ಕ ಮಾತಿಗೆ ಸತೀಶ ಸೈಲ್ ವಿರೋಧ ವ್ಯಕ್ತಪಡಿಸಿದರು.

ವಿ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا