Urdu   /   English   /   Nawayathi

ಕಂದಕಕ್ಕೆ ಉರುಳಿ ಬಿದ್ದ ಮಿನಿ ಬಸ್​ 35 ಪ್ರಯಾಣಿಕರು ಸಾವು: ಹಲವು ಜನರಿಗೆ ಗಾಯ

share with us

ಕಿಸ್ತ್ವಾರ್​​: 01 ಜುಲೈ 2019 (ಫಿಕ್ರೋಖಬರ್ ಸುದ್ದಿ) ಜಮ್ಮು ಮತ್ತು ಕಾಶ್ಮೀರದ ಕಿಸ್ತ್ವಾರ್​ ಜಿಲ್ಲೆಯ ಕೆಶ್ವಾನ್ ಎಂಬಲ್ಲಿ ಮಿನಿ ಬಸ್​ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 35 ಜನ ಸಾವಿಗೀಡಾಗಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ.

ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ. ಮೂವರು ಮಹಿಳೆಯರನ್ನ ಹೆಲಿಕಾಪ್ಟರ್​ ಮೂಲಕ ಜಮ್ಮು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮತ್ತಷ್ಟು ಜನರನ್ನು ಏರ್​ ಲಿಫ್ಟ್​ ಮಾಡುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳ ಹಿಂದೆಯಷ್ಟೆ ಟೆಂಪೋ ಟ್ರಾವೆಲರ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 11 ಜನ ವಿದ್ಯಾರ್ಥಿಗಳು ಸಾವಿಗೀಡಾಗಿದ್ದರು.​

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا