Urdu   /   English   /   Nawayathi

“ರಾಜೀನಾಮೆ ನೀಡಿರುವ 5 ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ”: ಸಿದ್ದು

share with us

ಬೆಂಗಳೂರು: 07 ಜುಲೈ 2019 (ಫಿಕ್ರೋಖಬರ್ ಸುದ್ದಿ) ರಾಜೀನಾಮೆ ನೀಡಿರುವ ಶಾಸಕರ ಪೈಕಿ 5 ಮಂದಿ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿಯವರು ಅಧಿಕಾರದ ಆಸೆಯಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಹಣ ಹಾಗೂ ಇತರೆ ಅಧಿಕಾರದ ಆಸೆ ತೋರಿಸಿ ಸೆಳೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ನಾನು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯಾವ ಶಾಸಕರೂ ಪಕ್ಷ ಬಿಡದಂತೆ ಸೂಚನೆ ನೀಡಿದ್ದೆ. ಆದರೂ ಕೆಲವರು ಹೋಗಿದ್ದಾರೆ. ಅವರ ಮನವೊಲಿಸುವ ಕರೆತರುವ ಪ್ರಯತ್ನ ನಡೆದಿದೆ ಎಂದು ಹೇಳಿದರು. ನನಗೆ ಅತ್ಯಾಪ್ತರು ಎಂಬುದೇನಿಲ್ಲ. ಕಾಂಗ್ರೆಸ್‍ನ ಎಲ್ಲಾ ಶಾಸಕರು ನನಗೆ ಆತ್ಮೀಯರೇ. ಅದೇ ರೀತಿ ಬಿಜೆಪಿಯಲ್ಲೂ ನನಗೆ ಆತ್ಮೀಯರಿದ್ದಾರೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಕುತೂಹಲ ಹುಟ್ಟುಹಾಕಿದರು. ಈಗಾಗಲೇ ಮುಂಬೈನಲ್ಲಿರುವ ಶಾಸಕರ ಜೊತೆ ಮಾತುಕತೆ ನಡೆಸಿದ್ದೇನೆ. ನಮ್ಮ ಪ್ರಯತ್ನವನ್ನು ನಾವು ಮುಂದುವರೆಸಿದ್ದೇವೆ. ಶೀಘ್ರವೇ ಎಲ್ಲವೂ ಒಂದು ಹಂತಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

# ಸದ್ಯದ ಪರಿಸ್ಥಿತಿಯಲ್ಲಿ ಸರ್ಕಾರವನ್ನು ಕಾಪಾಡಿಕೊಳ್ಳುವುದಷ್ಟೇ ಮುಖ್ಯ : ಎಚ್.ಕೆ.ಪಾಟೀಲ್
ಸದ್ಯದ ಪರಿಸ್ಥಿತಿಯಲ್ಲಿ ಸರ್ಕಾರವನ್ನು ಕಾಪಾಡಿಕೊಳ್ಳುವುದಷ್ಟೇ ಮುಖ್ಯ. ಸಚಿವ ಸ್ಥಾನ ಪಡೆಯುವುದು ಅಥವಾ ಬೇರೆ ಆಮಿಷಗಳು ಮುಖ್ಯ ಅಲ್ಲ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಹೈಕಮಾಂಡ್ ನಾಯಕರ ಜೊತೆ ಸಭೆಗೆ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಉಳಿಸಿಕೊಳ್ಳುವ ಪ್ರಯತ್ನ ನಡೆದಿದೆ. ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ, ವೇಣುಗೋಪಾಲ್ ಅವರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ.  ಹಲವು ರೀತಿಯಲ್ಲಿ ಚರ್ಚೆಗಳು ನಡೆದಿವೆ. ನಮ್ಮ ಶಾಸಕರುಗಳಲ್ಲಿರುವ ಅಸಮಾಧಾನವನ್ನು ಬಗೆಹರಿಸಿ ವಾತಾವರಣ ತಿಳಿಗೊಳಿಸಲು ಪ್ರಯತ್ನ ನಡೆದಿದೆ ಎಂದು ಹೇಳಿದರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا