Urdu   /   English   /   Nawayathi

ಪುತ್ತೂರು ಗ್ಯಾಂಗ್ ರೇಪ್ ಪ್ರಕರಣ; ಕಾಲೇಜಿಗೆ ದಾಳಿ ಮಾಡಿ, ಮೊಬೈಲ್​​ಗಳನ್ನ ವಶಕ್ಕೆ ಪಡೆದ ಪೊಲೀಸರು!

share with us

ಮಂಗಳೂರು: 08 ಜುಲೈ 2019 (ಫಿಕ್ರೋಖಬರ್ ಸುದ್ದಿ) ಪುತ್ತೂರು ಕಾಲೇಜು ವಿದ್ಯಾರ್ಥಿಗಳಿಂದ ನಡೆದ ಗ್ಯಾಂಗ್ ರೇಪ್ ಪ್ರಕರಣ ಮತ್ತು ಅದನ್ನು ವಿಡಿಯೋ ಮಾಡಿ ವೈರಲ್ ಮಾಡಿರುವ ಹಿನ್ನೆಲೆಯಲ್ಲಿ ಮುಂದೆ ಇಂತಹ ಘಟನೆ ತಪ್ಪಿಸಲು ಪೊಲೀಸರು ಉಪ್ಪಿನಂಗಡಿ ಕಾಲೇಜಿಗೆ ದಾಳಿ ಮಾಡಿ ವಿದ್ಯಾರ್ಥಿಗಳ ಬಳಿಯಿದ್ದ ಮೊಬೈಲ್​ಗಳನ್ನ ವಶಪಡಿಸಿಕೊಂಡರು. ಕಲಿಕಾ ಅವಧಿಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡಬಾರದೆಂದು ಇರುವ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ಉಪ್ಪಿನಂಗಡಿ ಪೊಲೀಸರು ಕಾಲೇಜಿಗೆ ದಾಳಿ ಮಾಡ, ಮೊಬೈಲ್​ ವಶಪಡಿಸಿಕೊಂಡಿದ್ದಾರೆ. ಉಪ್ಪಿನಂಗಡಿ ಎಸ್ ಐ ನಂದಕುಮಾರ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಕಾಲೇಜು ವಿದ್ಯಾರ್ಥಿಗಳ 24 ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಯಿತು. ವಶಪಡಿಸಿಕೊಂಡ ಮೊಬೈಲ್ ಗಳನ್ನು ಪೋಷಕರೊಂದಿಗೆ ಠಾಣೆಗೆ ಬಂದು ತೆಗೆದುಕೊಂಡು ಹೋಗುವಂತೆ ಪೊಲೀಸರು ಸೂಚಿಸಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا