Urdu   /   English   /   Nawayathi

ಮಹಾರಾಷ್ಟ್ರ: ಬ್ಯಾಂಕ್ ಕಟ್ಟಡದ ಮೇಲ್ಚಾವಣಿ ಕುಸಿತ, ಓರ್ವ ಸಾವು, 20 ಮಂದಿಗೆ ಗಾಯ

share with us

ಸೋಲಾಪುರ್: 31 ಜುಲೈ 2019 (ಫಿಕ್ರೋಖಬರ್ ಸುದ್ದಿ) ಮಹಾರಾಷ್ಟ್ರದ ಸೋಲಾಪುರದಲ್ಲಿ ಬುಧವಾರ ಬ್ಯಾಂಕ್ ಕಟ್ಟಡದ ಮೇಲ್ಚಾವಣಿ ಕುಸಿದು ಬಿದ್ದಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ಮಲಾದಲ್ಲಿರುವ ಬ್ಯಾಂಕ್ ಆಫ್ ಮಹಾರಾಷ್ಟ್ರ ಶಾಖೆಯ ಕಟ್ಟಡದ ಮೇಲ್ಚಾವಣಿ ಇಂದು ಬೆಳಗ್ಗೆ 11.30ರ ಸುಮಾರಿಗೆ ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕೆಲವು ಬ್ಯಾಂಕ್ ಸಿಬ್ಬಂದಿ ಕಟ್ಟಡದಿಂದ ಹೊರ ಬಂದಿದ್ದು, ಇನ್ನು ಕೆಲವು ಸಿಬ್ಬಂದಿ ಹಾಗೂ ಗ್ರಾಹಕರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು, ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا