Urdu   /   English   /   Nawayathi

ಇಂಡೋನೇಷ್ಯಾದ ಸುಮಾತ್ರದಲ್ಲಿ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

share with us

ಜಕಾರ್ತ: 03 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ಇಂಡೋನೇಷ್ಯಾದ ಸುಮತ್ರಾ ಹಾಗೂ ಜಾವಾ ದ್ವೀಪದಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ ಅದರ ತೀವ್ರತೆ 7 ರಷ್ಟು ದಾಖಲಾಗಿದೆ. ರಿಕ್ಟರ್‌ ಮಾಪಕದಲ್ಲಿ ಭೂಕಂಪದ ತೀವ್ರತೆ 7 ರಷ್ಟಿತ್ತು ಎಂದು ಅಮೆರಿಕದ ಭೂ ವಿಜ್ಞಾನ ಸಂಸ್ಥೆ ಮಾಹಿತಿ ನೀಡಿದೆ. ಇಂಡೋನೇಷ್ಯಾದ ಸುಮತ್ರಾ ದ್ವೀಪದಲ್ಲಿ ಭೂಕಂಪ ಕೇಂದ್ರೀಕೃತವಾಗಿತ್ತು. ಸಮುದ್ರದ 10 ಅಡಿ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಮೆರಿಕದ ಭೂ ವಿಜ್ಞಾನ ಸಂಸ್ಥೆ ತಿಳಿಸಿದೆ. ಸ್ಥಳೀಯ ಹವಾಮಾನ ಇಲಾಖೆ ಸುನಾಮಿ ಅಪಾಯದ ಬಗ್ಗೆ ಜನರಿಗೆ ಮುನ್ನೆಚ್ಚರಿಕೆ ನೀಡಿದೆ. ಪ್ರಾಥಮಿಕ ವರದಿಗಳ ಪ್ರಕಾರ ಯಾವುದೇ ಆಸ್ತಿಪಾಸ್ತಿ ಹಾನಿಯಾಗಿಲ್ಲ ಎನ್ನಲಾಗಿದೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا