Urdu   /   English   /   Nawayathi

“ಕರ್ನಾಟಕ ನೀರಿನಲ್ಲಿ ಮುಳುಗುತ್ತಿದ್ದರೆ ಬಿಜೆಪಿ-ಆರ್‌ಎಸ್‌ಎಸ್ ನವರು ಕುರ್ಚಿಗಾಗಿ ಕಿತ್ತಾಡುತ್ತಿದ್ದಾರೆ”

share with us

ಬೆಂಗಳೂರು: 07 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ಕರ್ನಾಟಕ ನೀರಿನಲ್ಲಿ ಮುಳುಗಿದೆ. ಆದರೆ, ಬಿಜೆಪಿ ಮತ್ತು ಆರ್‍ಎಸ್‍ಎಸ್‍ನವರು ಅಧಿಕಾರ ಹಂಚಿಕೆಯಲ್ಲಿ ಕಿತ್ತಾಟದಲ್ಲಿ ಮುಳುಗಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ. ಟ್ವಿಟ್ಟರ್‍ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷ ಬಿಜೆಪಿ ಮತ್ತು ಆರ್‍ಎಸ್‍ಎಸ್‍ನವರು ಅಧಿಕಾರ ಹಂಚಿಕೆಯಲ್ಲಿ ಮುಳುಗಿದರೆ, ಮಾಧ್ಯಮದವರು ಕಾಶ್ಮೀರದಲ್ಲಿ ಮುಳುಗಿದ್ದಾರೆ, ಏಕವ್ಯಕ್ತಿಯ ರಾಜ್ಯಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಲೇವಡಿ ಮಾಡಿದರು. ಕರ್ನಾಟಕ ನೀರಿನಲ್ಲಿ ಮುಳುಗಿದೆ, ಮತದಾರರು ಕಣ್ಣೀರಿನಲ್ಲಿ ಮುಳುಗಿದ್ದಾರೆ. ಕಾಯುತ್ತಿರಿ ರಾಜ್ಯ ಸರ್ಕಾರ ಶವವಾಗಿ ತೇಲಲಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆಯ ವ್ಯವಹಾರಕ್ಕಾಗಿ ದೆಹಲಿಯಲ್ಲಿದ್ದಾರೆ. ಬಿಜೆಪಿ ಸರ್ಕಾರಕ್ಕೆ ಸಂಪುಟ ವಿಸ್ತರಣೆ ಮುಖ್ಯವೋ ಅಥವಾ ತುರ್ತಾಗಿ ಎದುರಾಗಿರುವ ನೆರೆ ಪರಿಹಾರ ಮುಖ್ಯವೋ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಯಡಿಯೂರಪ್ಪ ಅವರು ಮತ್ತೊಮ್ಮೆ ನಮ್ಮದು ಅಪೂರ್ಣ ಸರ್ಕಾರ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ. ಅಧಿಕಾರ ಹಂಚಿಕೆ ಬಿಜೆಪಿಗೆ ಹೆಚ್ಚಿನ ಆದ್ಯತೆ ಇದ್ದಂತಿದೆ. ಜನಸಾಮಾನ್ಯರು, ನೆರೆಯಿಂದಾಗಿ ಸಂತ್ರಸ್ತರಾಗಿದ್ದಾರೆ. ಸಂಪುಟ ಕೂಡ ವಿಸ್ತರಣೆಯಾಗಿಲ್ಲ. ಮುಖ್ಯಮಂತ್ರಿ ತಾವೊಬ್ಬರೇ ಕೆಲಸ ಮಾಡುವುದಾಗಿ ಹೇಳಿಕೊಂಡು ತಿರುಗುತ್ತಿದ್ದಾರೆ. ಜನರ ಕಷ್ಟಗಳಿಗೆ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا