Urdu   /   English   /   Nawayathi

ಭಾರತ - ಪಾಕ್​ ಹದಗೆಟ್ಟ ಸಂಬಂಧ.. ಟೆನ್ಷನ್​ ಕಡಿಮೆ ಮಾಡಲು ಫ್ರಾನ್ಸ್​​​​ ಎಂಟ್ರಿ

share with us

ಪ್ಯಾರಿಸ್​: 21 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ಭಾರತ ಸರ್ಕಾರ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿ, ಸಂವಿಧಾನದ 370 ನೇ ವಿಧಿ ಹಾಗೂ ಆರ್ಟಿಕಲ್​ 35 ಅನ್ನು ರದ್ದು ಮಾಡಿ ಐತಿಹಾಸಿಕ ನಿರ್ಧಾರ ಕೈಗೊಂಡಿತ್ತು. ಈ ಹಿನ್ನೆಲೆಯಲ್ಲಿ ಜಮ್ಮು- ಕಾಶ್ಮೀರ ಹಾಗೂ ಲಡಾಖ್​ ಕೇಂದ್ರಾಡಳಿತ ಪ್ರದೇಶಗಳಾಗಿದ್ದವು. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ನಿರ್ಧಾರ ಪಾಕಿಸ್ತಾನದ ಕಸಿವಿಸಿಗೆ ಕಾರಣವಾಗಿದೆ. ಇದರಿಂದಾಗಿ ಪಾಕಿಸ್ತಾನ ಭಾರತದೊಂದಿಗೆ ವಾಣಿಜ್ಯ ವ್ಯವಹಾರ ಸೇರಿದಂತೆ ರಾಜತಾಂತ್ರಿಕ ಸಂಬಂಧಗಳನ್ನು ಕಡಿತ ಮಾಡಿದೆ. ಇನ್ನೊಂದೆಡೆ ಗಡಿಯಲ್ಲಿ ಯುದ್ಧದ ವಾತಾವರಣವೂ ನಿರ್ಮಾಣವಾಗಿದ್ದು, ಜಮ್ಮು-ಕಾಶ್ಮೀರ ವಿಷಯವನ್ನ ಅಂತಾರಾಷ್ಟ್ರೀಯ ಸಮುದಾಯದೆದುರು ಕೊಂಡೊಯ್ಯುವ ಯತ್ನವನ್ನ ಪಾಕಿಸ್ತಾನ ಮಾಡಿ ಮುಖಭಂಗವನ್ನು ಎದುರಿಸಿದೆ. ಇದೀಗ ಎರಡೂ ರಾಷ್ಟ್ರಗಳ ನಡುವೆ ಉಂಟಾಗಿರುವ ವೈಷಮ್ಯ ಕಡಿಮೆ ಮಾಡಲು ಅಂತಾರಾಷ್ಟ್ರೀಯ ಸಮುದಾಯ ಕಾರ್ಯಪ್ರವೃತ್ತವಾಗಿದೆ. ಇದೀಗ ಫ್ರಾನ್ಸ್​​ ಸಹ ಈ ಸಂಬಂಧ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್​ ಖುರೇಷಿ ಅವರಿಗೆ ಫೋನ್​ ಕರೆ ಮಾಡಿ ಮಾತನಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಯೂರೋಪ್​ ವ್ಯವಹಾರಗಳ ಮೇಲಿನ ಫ್ರೆಂಚ್​ ವಿದೇಶಾಂಗ ಸಚಿವ ಜೀನ್​ ಯೆವೀಸ್​​ ಲೆ ಡೆರೆನ್​​, ಎರಡೂ ರಾಷ್ಟ್ರಗಳು ದ್ವಿಪಕ್ಷೀಯ ಸಂಬಂಧಗಳನ್ನು ಮರು ಸ್ಥಾಪಿಸಿ ಶಾಂತಿಯುತವಾಗಿ ಮಾತುಕತೆ ಮೂಲಕ ಬಗೆ ಹರಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಮೊನ್ನೆಯಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದರು. ಇದೇ ವೇಳೆ, ಎರಡೂ ರಾಷ್ಟ್ರಗಳ ನಡುವಣ ಸಮಸ್ಯೆ ಬಗೆ ಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಇರುವುದಾಗಿ ಆ ಬಳಿಕ ಹೇಳಿಕೆಯನ್ನೂ ನೀಡಿದ್ದರು. ಈ ಮೊದಲೇ ಭಾರತ ಕಾಶ್ಮೀರ ವಿಷಯದಲ್ಲಿ ಮೂರನೇ ರಾಷ್ಟ್ರದ ಮಧ್ಯಸ್ಥಿಕೆಗೆ ಭಾರತ ಸ್ಪಷ್ಟವಾಗಿ ನಿರಾಕರಿಸಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا