Urdu   /   English   /   Nawayathi

ಕೊಡಗು ಜಿಲ್ಲೆಗೆ ಮತ್ತೆ ಆತಂಕ: ಭಾರಿ ಮಳೆಯ ಮುನ್ಸೂಚನೆ ನೀಡಿತು ಹವಾಮಾನ ಇಲಾಖೆ

share with us

ಮಡಿಕೇರಿ: 22 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ಕೇಂದ್ರ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಪ್ರಕಾರ ಜಿಲ್ಲೆಯಲ್ಲಿ ಆಗಸ್ಟ್ 23 ರಂದು ಭಾರಿ ಮಳೆ ಬೀಳಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ‌. ಆಗಸ್ಟ್ 22(ಇಂದು) ಹಾಗೂ 23 ರಂದು ಜಿಲ್ಲೆಯಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಹೀಗಾಗಿ ನಾಳೆ ಮಳೆ ಪ್ರಮಾಣ ಚುರುಕಾಗುವ ಸಾಧ್ಯತೆ ಇದ್ದು, ಈಗಾಗಲೇ ಜಿಲ್ಲೆಯಲ್ಲಿ ಸುರಿದಿರುವ ಮಳೆಯಿಂದ ಪ್ರವಾಹ ಉಂಟಾಗಿ ಹಲವೆಡೆ ರಸ್ತೆ ಹಾಗೂ ಭೂ ಕುಸಿತ ಆಗಿರುವುದರಿಂದ ಜನ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಡಳಿತ ಸೂಚಿಸಿದೆ.

rainfall in Kodagu

ಹವಾಮಾನ ಮುನ್ಸೂಚನೆ ಪ್ರತಿ

ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳು ಎದುರಾದರೆ ತುರ್ತು ದೂರವಾಣಿ ಸಂಖ್ಯೆ 08272-221077 ಸಂಪರ್ಕಿಸಲು ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا