Urdu   /   English   /   Nawayathi

ಹಾಸನ: ಟ್ರ್ಯಾಕರ್ ಗೆ ಬೈಕ್ ಡಿಕ್ಕಿ- ತಾಯಿ ಮಗ ಸೇರಿ 3 ಸಾವು

share with us

ಹಾಸನ: 22 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ನಿಂತಿದ್ದ ಟ್ರ್ಯಾಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮಗ ಸೇರಿ ಮೂವರು ಮೃತಪಟ್ಟಿರುವ ಘಟನೆ ಅರಕಲಗೂಡು ತಾಲ್ಲೂಕಿನಲ್ಲಿ ನಡೆದಿದೆ. ಮಂಜುಳಾ (35), ಆಕಾಶ್ (9) ಮಣಿ (27) ಮತ್ತು ಮೃತ ಡ್ರಾಪ್ ಪಡೆದು ಬೈಕ್ ಹತ್ತಿ ಹೋಗುತ್ತಿದ್ದ ಸಮಯದಲ್ಲಿ ಕಾಟ್ನಾಳು ಬೋರೆ ಹತ್ತಿರ ಈ ದುರ್ಘಟನೆ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರನ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದ್ದು ಎಂದು ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಕೊಣನೂರು ಪೋಲಿಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا