Urdu   /   English   /   Nawayathi

ಟೆಕ್ಸಾಸ್'ನಲ್ಲಿ ಗುಂಡಿನ ದಾಳಿ: 5 ಸಾವು, 21ಕ್ಕೂ ಹೆಚ್ಚು ಜನರಿಗೆ ಗಾಯ

share with us

ವಾಷಿಂಗ್ಟನ್: 01 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಅಮೆರಿಕಾದಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ 5 ಜನರು ಸಾವನ್ನಪ್ಪಿ, 21ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಟೆಕ್ಸಾಸ್'ನ ಎಲ್ ಪಾಸೊ ನಗರದಲ್ಲಿ ಶನಿವಾರ ನಡೆದಿದೆ. ಅಮೆರಿಕಾದ ಅಂಚೆ ಸೇವಾ ವಾಹನದ ಮೇಲೆ ಶಸ್ತ್ರಾಸ್ತ್ರ ಹಿಡಿದಿದ್ದ ವ್ಯಕ್ತಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು ದಾಳಿಯಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. 30 ವರ್ಷದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ದಾಳಿಯ ಹಿಂದಿರುವ ಉದ್ದೇಶ ಈವರೆಗೂ ತಿಳಿದುಬಂದಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಎಲ್ ಪಾಸೊ ಪೊಲೀಸರು ಕಾರ್ಯಾಚರಣೆ ನಡೆಸಿ ದಾಳಿಕೋರನನ್ನು ಹತ್ಯೆ ಮಾಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا