Urdu   /   English   /   Nawayathi

ರಭಸವಾಗಿ ಬಂದ ಕಾರು 2 ಬೈಕ್​ಗೆ ಡಿಕ್ಕಿ... ಓರ್ವ ಸಾವು, ಮೂವರಿಗೆ ಗಂಭೀರ ಗಾಯ

share with us

ಉಡುಪಿ: 01 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಕುಂದಾಪುರ ತಾಲೂಕಿನ ಗಂಗೊಳ್ಳಿ ಗುಜ್ಜಾಡಿಯಲ್ಲಿ ವೇಗವಾಗಿ ಬಂದ ಕಾರು 2 ಬೈಕ್​ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಮ್ಮದ್ ತಾರೀಕ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಗಂಗೊಳ್ಳಿಯಿಂದ ತ್ರಾಸಿ ಕಡೆ ಹೋಗುತ್ತಿದ್ದ ಕಾರು ಎರಡು ಬೈಕ್​ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಖಾಸಗಿ‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا