Urdu   /   English   /   Nawayathi

ಸಂಸದ ಡಿ.ಕೆ.ಸುರೇಶ್ ಗೆ ಸ್ಥೈರ್ಯ ತುಂಬಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ

share with us

ನವದೆಹಲಿ: 10 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಂಸದ ಡಿ.ಕೆ. ಸುರೇಶ್ ಅವರನ್ನು ತಮ್ಮ ನಿವಾಸಕ್ಕೆ ಇಂದು ಬೆಳೆಗ್ಗೆ ಕರೆಸಿಕೊಂಡು ಅವರ ಸಹೋದರ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಯೋಗಕ್ಷೇಮ ವಿಚಾರಿಸಿ, ನೈತಿಕ ಸ್ಥೈರ್ಯ ತುಂಬಿದ್ದಾರೆ. ಮಂಗಳವಾರ ಬೆಳಗ್ಗೆ ಸುರೇಶ್ ಅವರಿಗೆ ದೂರವಾಣಿ ಕರೆ ಮಾಡಿದ ಸೋನಿಯಾಗಾಂಧಿ ಅವರು ತಮ್ಮ ನಿವಾಸ 10, ಜನಪಥ್ ಗೆ ಅವರನ್ನು ಬರುವಂತೆ ಆಹ್ವಾನಿಸಿದರು.ಸೋನಿಯಾ ನಿವಾಸಕ್ಕೆ ಆಗಮಿಸಿದ ಸಂಸದ ಡಿಕೆ ಸುರೇಶ್ ಸುಮಾರು 30 ನಿಮಿಷಗಳ ಕಾಲ ಚೆರ್ಚೆ ನಡೆಸಿದ್ದಾರೆ.ಈ ವೇಳೆ ಸೋನಿಯಾ ಗಾಂಧಿ ಅವರು ಡಿ.ಕೆ. ಶಿವಕುಮಾರ್ ಅವರು ಹೇಗಿದ್ದಾರೆ,ಅವರ ಆರೋಗ್ಯ ಹೇಗಿದೆ ಎಂದು ವಿಚಾರಿಸಿಕೊಂಡರು. ಅಷ್ಟೇ ಅಲ್ಲದೆ ಡಿ.ಕೆ. ಶಿವಕುಮಾರ್ ಅವರ ಜತೆ ನಾವೆಲ್ಲರೂ ಹಾಗೂ ಪಕ್ಷ ಅವರ ಜತೆಗಿದೆ.ಯಾವುದೇ ಕಾರಣಕ್ಕೂ ಅವರು ಧೈರ್ಯ ಕಳೆದುಕೊಳ್ಳುವುದು ಬೇಡ. ಅದು ಕಾನೂನು ಹೋರಾಟ ಮುಂದುವರೆಸಲಿ.ರಾಜಕೀಯ ಹೋರಾಟವೇ ಇರಲಿ ಅವರೊಂದಿಗೆ ನಾವೆಲ್ಲರೂ ಇದ್ದೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ತಮ್ಮ ಪ್ರಬಲ ವಿರೋಧಿಗಳನ್ನು ಸದೆಬಡಿಯಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ತಮಗೆ ಗೊತ್ತಿದೆ. ಕಾಲವೇ ಎಲ್ಲಕ್ಕೂ ಉತ್ತರ ಹೇಳಲಿದೆ.ಶಿವಕುಮಾರ್ ಎಲ್ಲವನ್ನೂ ಗೆದ್ದು ಬರಲಿದ್ದಾರೆ ಎಂಬ ವಿಶ್ವಾಸ ತಮಗಿದೆ ಎಂದು ಅವರು ತಿಳಿಸಿದರು ಎನ್ನಲಾಗಿದೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا