Urdu   /   English   /   Nawayathi

ಪ್ರಧಾನಿ ಮೋದಿ ಸಂವಿಧಾನ ನೆನಪಿಸಿಕೊಳ್ಳುವ ವಿಶ್ವಾಸವಿದೆ: ಓವೈಸಿ

share with us

ನವದೆಹಲಿ: 11 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಂವಿಧಾನವನ್ನು ನೆನಪಿಸಿಕೊಳ್ಳುವ ವಿಶ್ವಾಸವಿದೆ ಎಂದು ಆಲ್ ಇಂಡಿಯಾ ಮಜಿಲಿಸ್-ಇ-ಇತ್ತೆಹುದುಲ್ ಮುಸ್ಲೀಮೀನ್(ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಬುಧವಾರ ಹೇಳಿದ್ದಾರೆ. ಗೋವು ನೀತಿಗಳ ಬಗ್ಗೆ ಸರ್ಕಾರವನ್ನು ಟೀಕಿಸುವವರು ದೇಶವನ್ನು ಹಾಳು ಮಾಡುತ್ತಿದ್ದಾರೆ ಎಂಬ ಪ್ರಧಾನಿ ಮೋದಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಓವೈಸಿ, ಗೋವು ನಮ್ಮ ಹಿಂದೂ ಸಹೋದರರಿಗೆ ಪವಿತ್ರ ಪ್ರಾಣಿ. ಆದರೆ ಸಂವಿಧಾನದಲ್ಲಿ ಮಾನವರಿಗೆ ಬದುಕುವ ಹಕ್ಕು ಮತ್ತು ಸಮಾನತೆಯನ್ನು ನೀಡಲಾಗಿದೆ. ಪ್ರಧಾನಿ ಮೋದಿ ಅದನ್ನು ನೆನಪಿಸಿಕೊಳ್ಳುತ್ತಾರೆ ಎಂದು ಭಾವಿಸಿದ್ದೇನೆ ಎಂದರು. ಇಂದು ಮಥುರಾದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಕೆಲವರು ಓಂ ಮತ್ತು ಗೋವು ಎಂಬ ಶಬ್ದ ಕೇಳಿದ ತಕ್ಷಣ ದೇಶವು 16ನೇ ಶತಮಾನಕ್ಕೆ ಮರಳಿದೆ ಎಂದು ಕಿರುಚುತ್ತಾರೆ. ಅಂತಹ ಜನರು ರಾಷ್ಟ್ರವನ್ನು ನಾಶಪಡಿಸುತ್ತಾರೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ಮಥುರಾದಲ್ಲಿ ರಾಷ್ಟ್ರೀಯ ಪ್ರಾಣಿ ರೋಗ ನಿಯಂತ್ರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا