Urdu   /   English   /   Nawayathi

ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಿ; ಕಾಂಗ್ರೆಸ್ ಸರ್ಕಾರದ ಸಿಎಂಗಳಿಗೆ ಸೋನಿಯಾ ಗಾಂಧಿ ಆದೇಶ

share with us

ನವದೆಹಲಿ: 14 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಚುನಾವಣಾ ಪ್ರಣಾಳಿಕೆಗಳಲ್ಲಿ ನೀಡಿದ್ದ ಭರವಸೆಗಳನ್ನು ಜಾರಿಗೆ ತರಲು ಸರ್ಕಾರ ಮತ್ತು ಸಂಘ-ಸಂಸ್ಥೆಗಳ ನಡುವೆ ಪರಿಣಾಮಕಾರಿ ಸಮನ್ವಯತೆ ಸಾಧಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳೊಡನೆ ಸಭೆ ನಡೆಸಿ ಚರ್ಚಿಸಿದರು. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಾದ ಪಂಜಾಬ್, ರಾಜಸ್ತಾನ, ಮಧ್ಯ ಪ್ರದೇಶ, ಛತ್ತೀಸ್ ಗಢ ಮತ್ತು ಪುದುಚೆರಿಗಳಲ್ಲಿ ಸಮನ್ವಯ ಸಮಿತಿ ಅಥವಾ ಅಂತಹ ಬೇರೆ ಕಾರ್ಯವಿಧಾನಗಳನ್ನು ಸ್ಥಾಪಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.ಜನರನ್ನು ಸಂಪರ್ಕಿಸಿ ಅವರ ಸಮಸ್ಯೆಗಳನ್ನು ಆಲಿಸಲು ರೋಸ್ಟರ್ ಮಾದರಿಯಲ್ಲಿ ಪಕ್ಷದ ಕಾರ್ಯಾಲಯಗಳಲ್ಲಿ ಸಚಿವರುಗಳನ್ನು ನಿಯೋಜಿಸುವಂತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯ ಸರ್ಕಾರಗಳಿಗೆ ಸೋನಿಯಾ ಗಾಂಧಿ ಆದೇಶಿಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಮತ್ತು ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳಲ್ಲಿ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಪರಿಸ್ಥಿತಿ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳಲ್ಲಿ ಪ್ರಜಾಪ್ರಭುತ್ವದ ಪಾವಿತ್ರ್ಯತೆಯನ್ನು ಕಾಪಾಡಲಾಗುತ್ತದೆ. ಜನ ಕೇಂದ್ರಿತ ಆಡಳಿತ ಮತ್ತು ಆರ್ಥಿಕ ಮರುಹಂಚಿಕೆಯಾಗುತ್ತಿದೆ ಎಂದು ಸಭೆಯಲ್ಲಿ ಕಾಂಗ್ರೆಸ್ ಚರ್ಚಿಸಿದೆ ಎಂದು ತಿಳಿದುಬಂದಿದೆ. ಪ್ರತಿನಿತ್ಯ ಸಚಿವರುಗಳಿಗೆ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಇದ್ದು ಸಾರ್ವಜನಿಕರ ಸಮಸ್ಯೆ ಮತ್ತು ಅಹವಾಲುಗಳನ್ನು ಆಲಿಸಲು ಮುಖ್ಯಮಂತ್ರಿಗಳಿಗೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇದೇ ರೀತಿಯ ಆಡಳಿತ ಕಾರ್ಯವಿಧಾನವನ್ನು ಅಳವಡಿಸಿಕೊಂಡಿತ್ತು.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا