Urdu   /   English   /   Nawayathi

ಅಪಘಾತಗಳನ್ನು ತಡೆಯಲು ತುಮಕೂರು ಪೊಲೀಸರ ‘ಮಾಸ್ಟರ್ ಪ್ಲಾನ್’

share with us

ತುಮಕೂರು: 14 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ತುಮಕೂರು ತುಮಕೂರಿಗೆ ನೂತನವಾಗಿ ನೂತನವಾಗಿ ಬಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ ಕೋನಾ ವಂಶಿಕೃಷ್ಣ ಅವರು ತುಮಕೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಪಘಾತಗಳು ನಡೆದು ಅಮಾಯಕರ ಜೀವ ಬಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ . ಜಿಲ್ಲಾ ಪೊಲೀಸ್ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ 88 ಅಪಘಾತ ವಲಯಗಳನ್ನು ಗುರುತಿಸಿದ್ದು, ಅವುಗಳನ್ನು ಬ್ಲಾಕ್ ಸ್ಪಾಟ್​​ಗಳೆಂದು ಘೋಷಣೆ ಮಾಡಿದೆ. ಈ ಸ್ಥಳಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲು ಯೋಜನೆಯೊಂದನ್ನು ಕೂಡ ಸಿದ್ಧಪಡಿಸುತ್ತಿದೆ. ತುಮಕೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಗೆ ಕಡಿವಾಣ ಹಾಕಲು ಜಿಲ್ಲಾ ಪೊಲೀಸ್ ಇಲಾಖೆ ಸಮೀಕ್ಷೆಯೊಂದನ್ನು ನಡೆಸಿದ್ದು, ಅದರಲ್ಲಿ ಬರೋಬ್ಬರಿ 88 ಅಪಘಾತ ವಲಯಗಳನ್ನು ಗುರುತಿಸಿದೆ. ಅಲ್ಲದೇ ಅವುಗಳನ್ನು ಬ್ಲಾಕ್ ಸ್ಪಾಟ್​​ಗಳೆಂದು ಘೋಷಣೆ ಮಾಡಿದೆ. ಬಹುತೇಕ ಉತ್ತರ ಕರ್ನಾಟಕ ಹಾಗೂ ಹಾಸನ, ಮಂಗಳೂರು ಭಾಗದಿಂದ ರಾಜಧಾನಿ ಬೆಂಗಳೂರು ತಲುಪಬೇಕೆಂದರೆ ತುಮಕೂರು ಜಿಲ್ಲೆಯನ್ನು ದಾಟಿ ಹೋಗಬೇಕು. ಜಿಲ್ಲೆಯಲ್ಲಿ ಕಳೆದ ವರ್ಷ 766 ಅಪಘಾತಗಳು ಸಂಭವಿಸಿದ್ದು, ಅನೇಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಕಳೆದ ಎಂಟು ತಿಂಗಳಿನಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ನೇತೃತ್ವದಲ್ಲಿ ಜಿಲ್ಲಾದ್ಯಂತ ಸಮೀಕ್ಷೆ ಮಾಡಲಾಗಿದೆ. ಸಮೀಕ್ಷೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠ ಅಧಿಕಾರಿಗಳಾಗಿರುವ ಉದ್ದೇಶ್ .ಡಿವೈಎಸ್ಪಿಗಳಾದ ತಿಪ್ಪೇಸ್ವಾಮಿ ಶಿರಾ ಗ್ರಾಮಾಂತರ ಡಿವೈಎಸ್ಪಿ ವೆಂಕಟೇಶ್ ಸ್ವಾಮಿ ತಿಪಟೂರಿನ ಡಿವೈಎಸ್ಪಿ ಸೇರಿದಂತೆ ಇನ್ಸ್ ಪೆಕ್ಟರ್ ಗಳ ಸಹಯೋಗದಲ್ಲಿ ಮೂರು ಬಾರಿ ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಭೆ ನಡೆಸಿ 88 ಬ್ಲಾಕ್ ಸ್ಪಾಟ್​​ಗಳನ್ನು ಗುರುತಿಸಲಾಗಿದೆ. ಹೇಗಾದರೂ ಮಾಡಿ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಿ ಅಮಾಯಕರ ಜೀವವನ್ನು ರಕ್ಷಿಸುವುದೇ ನಮ್ಮ ಮೂಲ ಗುರಿ ಎಂದು ಎಸ್ಪಿ ಕೋನಾ ವಂಶಿಕೃಷ್ಣ ಅಚಲ ದೃಢ ನಿರ್ಧಾರವನ್ನು ಕೈಗೊಂಡಿದ್ದಾರೆ ಹೌದು ದಿನದಿಂದ ದಿನಕ್ಕೆ ತುಮಕೂರು ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲಿಯೂ ರಾಷ್ಟ್ರೀಯ ಹೆದ್ದಾರಿ ಟು ನಾಟ್ ಸಿಕ್ಸ್ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ ನಲವತ್ತೆಂಟು ರಸ್ತೆಗಳಲ್ಲಿ ಅತಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿವೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಸೇರಿದಂತೆ ತುಮಕೂರು ನಗರ ವ್ಯಾಪ್ತಿಯ ಕೋರ ಪೊಲೀಸ್ ಠಾಣೆ ವ್ಯಾಪ್ತಿ ಹಾಗೂ ಶಿರಾ ತಾಲ್ಲೂಕಿನಲ್ಲಿ ಕಳ್ಳಂಬೆಳ್ಳ ಪೊಲೀಸ್ ಠಾಣೆ ತಾವರೆಕೆರೆ ಪೊಲೀಸ್ ತಡೆ ಶಿರಾ ನಗರ ಠಾಣೆ ವ್ಯಾಪ್ತಿಗಳಲ್ಲಿ ವ್ಯಾಪಕವಾಗಿ ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿವೆ ಅದರ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಇರುವ ಡಾಕ್ಟರ್ ಕೋನಾ ವಂಶಿಕೃಷ್ಣ ಅವರು ತಮ್ಮ ಅಧಿಕಾರಿಗಳ ಜೊತೆ ನಿರಂತರವಾಗಿ ಸಮೀಕ್ಷೆಗಳನ್ನು ನಡೆಸಿ ಅಪಘಾತ ವಲಯಗಳನ್ನು ಗುರುತಿಸಿದ್ದಾರೆ.ಅಂತಹ ಅಪಘಾತಗಳು ನಡೆಯುವ 500 ಮೀಟರ್ ಸುತ್ತಳತೆಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಇಲ್ಲಿ ಹೆಚ್ಚಿನದಾಗಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಿ ಅಪಘಾತಗಳನ್ನು ತಡೆಯಲು ಮಾಸ್ಟರ್ ಪ್ಲಾನ್ನ ಎಸ್ಪಿಯವರು ರಚಿಸಿದ್ದಾರೆ .ಎಸ್ಪಿ ಅವರ ಈ ನಿರಂತರ ಶ್ರಮಕ್ಕೆ ಸಾರ್ವಜನಿಕರಿಂದ ಅಪಾರ ಪ್ರಮಾಣದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 

# 88 ಬ್ಲಾಕ್ ಸ್ಪಾಟ್​​ಗಳನ್ನು ಗುರುತಿಸಿದ ತುಮಕೂರು ಪೊಲೀಸ್ ಇಲಾಖೆ:
ಹಾಸನ ಮತ್ತು ಮಂಗಳೂರು ಜಿಲ್ಲೆಯಿಂದ ಬೆಂಗಳೂರಿಗೆ ತೆರಳುವಂತಹ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಅತಿಹೆಚ್ಚು ಬ್ಲಾಕ್ ಸ್ಪಾಟ್​ಗಳನ್ನು ಗುರುತಿಸಲಾಗಿದೆ. ಅದೇ ರೀತಿ ಉತ್ತರ ಕರ್ನಾಟಕ ಭಾಗದಿಂದ ಬೆಂಗಳೂರು ತಲುಪುವಂತಹ ರಾಷ್ಟ್ರೀಯ ಹೆದ್ದಾರಿ 48ರಲ್ಲಿಯೂ ಅನೇಕ ಬ್ಲಾಕ್ ಸ್ಪಾಟ್​ಗಳನ್ನು ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ನಿರಂತರವಾಗಿ ಪೊಲೀಸರನ್ನು ರಾತ್ರಿ ಹಾಗೂ ಹಗಲು ವೇಳೆ ಪಾಟ್ರೋಲಿಂಗ್ ಮಾಡಲು ಸೂಚಿಸಲಾಗಿದೆ. ಒಟ್ಟಾರೆ ತುಮಕೂರು ಜಿಲ್ಲೆಯಲ್ಲಿ ಅಪಘಾತಗಳಿಂದ ಸಾವು-ನೋವುಗಳಿಗೆ ತುತ್ತಾಗುತ್ತಿರುವ ಪ್ರಯಾಣಿಕರನ್ನು ಪಾರು ಮಾಡಲು ಜಿಲ್ಲಾ ಪೊಲೀಸ್ ಇಲಾಖೆ 88 ಬ್ಲಾಕ್ ಸ್ಪಾಟ್​​​​ಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲು ಯೋಜನೆಯೊಂದನ್ನು ಸಿದ್ಧಪಡಿಸುತ್ತಿದೆ.

ಕಳೆದ ವರ್ಷದಿಂದ ಇಲ್ಲಿಯ ತನಕ ಸುಮಾರು 700 ಕ್ಕೂ ಹೆಚ್ಚು ಮಂದಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಸ್ಪಿ ಕೋನಾ ವಂಶಿಕೃಷ್ಣ ತುಮಕೂರು ಜಿಲ್ಲೆಯಲ್ಲಿ ಅಪಘಾತಗಳು ನಡೆದು ಸುಮಾರು ಏಳು ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಇದು ಆತಂಕದ ವಿಚಾರ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ಡಾ ಕೋನ ವಂಶಿಕೃಷ್ಣ ಆತಂಕ ವ್ಯಕ್ತಪಡಿಸಿದ್ದಾರೆ. ದ್ವಿಚಕ್ರ ವಾಹನಗಳು ಕಾರುಗಳು ಬಸ್ಸು ಲಾರಿ ಸೇರಿದಂತೆ ಇತರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸುಮಾರು ಎಲ್ಲಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಸುಗಮ ಸಂಚಾರಕ್ಕೆ ಪೊಲೀಸ್ ಇಲಾಖೆ ಹಲವಾರು ಮಾರ್ಗೋಪಾಯಗಳ ಮಾಡಿದ್ದರೂ ಕೂಡ ಪದೇ ಪದೇ ಅಪಘಾತಗಳು ಸಂಭವಿಸುತ್ತಲೇ ಇವೆ. ವಾಹನಗಳ ಚಾಲಕರುಗಳು ದ್ವಿಚಕ್ರ ವಾರಗಳ ಸವಾರರೂ ಸೇರಿದಂತೆ ಇತರರು ಸಂಚಾರಿ ನಿಯಮಗಳನ್ನು ಕಡ್ಡಾಯ ಕಡ್ಡಾಯವಾಗಿ ಪಾಲಿಸಿದರೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಹಾಗೂ ಅಮಾಯಕರ ಜೀವವನ್ನು ರಕ್ಷಿಸಿ ಬಹುದೆಂದು ಎಸ್ಪಿಯವರು ಅಭಿಪ್ರಾಯಪಟ್ಟಿದ್ದಾರೆ. ಅದಕ್ಕಾಗಿಯೇ ಪೊಲೀಸ್ ಇಲಾಖೆ ವತಿಯಿಂದ ಅಧಿಕಾರಿಗಳ ಸಹಯೋಗದಲ್ಲಿ ಎಂಬತ್ತು ಎಂಟು ಅಪಘಾತ ವಲಯಗಳನ್ನು ಗುರುತಿಸಲಾಗಿದೆ ವಾಹನಗಳ ಸವಾರರು ದಯವಿಟ್ಟು ಸಂಚಾರಿ ನಿಯಮಗಳನ್ನು ಪಾಲಿಸಬೇಕೆಂದು ಪದೇ ಪದೇ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಪಘಾತದಲ್ಲಿ ಸಾವುಗಳು ಸಂಭವಿಸಬಹುದು ಆದರೆ ಅವರನ್ನೇ ನಂಬಿಕೊಂಡ ಅವರ ಮಕ್ಕಳು ಕುಟುಂಬ ಜೀವನ ಪರ್ಯಂತ ಕಣ್ಣೀರಲ್ಲಿ ಕೈ ತೊಳೆಯುತ್ತಾರೆ .ಹಾಗಾಗಿ ಪ್ರತಿಯೊಬ್ಬರೂ ಸಂಚಾರಿ ನಿಯಮಗಳನ್ನು ಪಾಲಿಸಬೇಕು ಹಾಗೂ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ನ್ನು ಧರಿಸುವುದಲ್ಲ ಕಾರುಗಳ ಚಾಲಕರು ಸೀಟ್ ಬೆಲ್ಟ್ ಧರಿಸಬೇಕು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳ ಚಾಲಕರು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿ ಅಪಘಾತಗಳಿಗೆ ಕಾರಣವಾಗುತ್ತಿದ್ದಾರೆ ಅದರ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಂಡು ಅಪಘಾತಗಳನ್ನು ತಪ್ಪಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ .ಜಿಲ್ಲೆಯಾದ್ಯಂತ ಎಲ್ಲ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅಪಘಾತಗಳ ಸಂಖ್ಯೆಯನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆಯನ್ನು ನೀಡಿದ್ದಾರೆ .

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا