Urdu   /   English   /   Nawayathi

ಪ್ರಚೋದನಕಾರಿ ಭಾಷಣ: ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು

share with us

ಬೆಂಗಳೂರು: 17 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಪ್ರಚೋದನಕಾರಿ ಭಾಷಣ ಮಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೆಪಿಸಿಸಿ ಬೆಂಗಳೂರು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಆನಂದ್, ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತರಿಗೆ ಸೋಮವಾರ ದೂರು ನೀಡಿದ್ದಾರೆ. ಸೆ 15 ರಂದು ನಗರದ ಪುರಭವನದಲ್ಲಿ ಶ‍್ರೀರಾಮ ಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ನಾಯಕರು ಹಾಗೂ ಮುಸ್ಲಿಂ ಜನಾಂಗ, ಗೋಹತ್ಯೆ ವಿಷಯವನ್ನು ಪ್ರಸ್ತಾಪಿಸಿ ದೇಶಭಕ್ತ ಮುಸಲ್ಮಾನರು ಬಿಜೆಪಿಗೆ ಮತ ಹಾಕುತ್ತಾರೆ. ಪಾಕಿಸ್ತಾನಕ್ಕೆ ಬೆಂಬಲಿಸುವವರು ಬಿಜೆಪಿಗೆ ಮತದಾನ ಮಾಡುವುದಿಲ್ಲ. ಮುಸ್ಲಿಂ ಮತ ಪಡೆದು ಗೆಲುವು ಸಾಧಿಸುವ ಶಾಸಕರು ಹಿಜಡಾಗಳು ಎಂದು ಅವಮಾನಿಸಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಈಶ್ವರಪ್ಪ ಅವರ ಈ ಹೇಳಿಕೆ ಹಿಂದೂ-ಮುಸ್ಲಿಂರ ನಡುವೆ ಸಂಘರ್ಷಕ್ಕೆ ಪ್ರೇರಣೆ ನೀಡುತ್ತದೆ. ರಾಜ್ಯದಲ್ಲಿ ಕೋಮುದೊಂಭಿ ಕೆರಳಿಸುವ ಉದ್ದೇಶವಾಗಿದೆ. ಇಂತಹ ಪ್ರಚೋದನಕಾರಿ ಹೇಳಿಕೆ ನೀಡಿರುವುದರಿಂದ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕಾಂಗ್ರೆಸ್ ದೂರಿನಲ್ಲಿ ಒತ್ತಾಯಿಸಿದೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا