Urdu   /   English   /   Nawayathi

ಉತ್ತರ ಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಆರು ಮಂದಿ ಸಾವು

share with us

ಲಖನೌ: 21 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಉತ್ತರ ಪ್ರದೇಶದ ಇಟಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಭಾರೀ ಸ್ಫೋಟ ಸಂಭವಿಸಿದ್ದು, ಆರು ಮಂದಿ ಮೃತಪಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಮಿರಾಚಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಢದಲ್ಲಿ ಈ ಘಟನೆ ನಡೆದಿದ್ದು, ಸ್ಫೋಟದ ತೀವ್ರತೆಗೆ ಪಟಾಕಿ ಕಾರ್ಖಾನೆಯ ಕಟ್ಟಡ ಸಂಪೂರ್ಣ ಧ್ವಂಸಗೊಂಡಿದೆ. ಹೀಗಾಗಿ ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 11 ಜನರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರು ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ಇಟಾ ಎಎಸ್ ಪಿ ಸಂಜಯ್ ಕುಮಾರ್ ಅವರು ತಿಳಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಘಟನೆಗೆ ಕಾರಣ ಇನ್ನು ಪತ್ತೆಯಾಗಿಲ್ಲ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ಗುಡ್ಡ ಪ್ರದೇಶದ ಮನೆಯೊಂದರಲ್ಲಿ ಪಟಾಕಿ ಕಾರ್ಖಾನೆ ನಡೆಸಲಾಗುತ್ತಿತ್ತು. ಇದು ಮುನ್ನಿ ದೇವಿ ಎಂಬುವವರ ಹೆಸರಿನಲ್ಲಿದ್ದು, ಸ್ಫೋಟ ಸಂಭವಿಸಿದ ವೇಳೆ 15-20 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا