Urdu   /   English   /   Nawayathi

ನೂತನ ಮೋಟಾರು ವಾಹನ ಕಾಯ್ದೆ ವಿರೋಧಿಸಿ ಬೆಳಗಾವಿಯಲ್ಲಿ ವಕೀಲರಿಂದ ಪ್ರತಿಭಟನೆ

share with us

ಬೆಳಗಾವಿ: 22 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಸಂಚಾರಿ ನಿಯಮ ಉಲ್ಲಂಘಿಸಿದ ಸಾರ್ವಜನಿಕರಿಗೆ ದಂಡ ಹಾಕುವ ಪೊಲೀಸರು, ಅಧಿಕಾರಿಗಳು ತಪ್ಪು ಮಾಡಿದರೆ ಕಣ್ಮುಚ್ಚಿ ಕುಳಿತುಕೊಳ್ಳುತ್ತಿದ್ದಾರೆ. ಅದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಮನವಿ ಸಲ್ಲಿಸಿದೆ. ಸಂಚಾರಿ ನಿಯಮಗಳು ಎಲ್ಲರಿಗೂ ಒಂದೇ. ಅಧಿಕಾರಿಗಳು ನಿಯಮ ಉಲ್ಲಂಘನೆ ಮಾಡಿದರೆ ಅವರ ಮೇಲೆ ಸಂಚಾರಿ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಶುಕ್ರವಾರ ಮಹಾನಗರ ಪಾಲಿಕೆಯ ವಾಹನವು ನಗರದ ಖಂಜೆರಗಲ್ಲಿಯಲ್ಲಿ ರಸ್ತೆ ಮಧ್ಯದಲ್ಲಿ ಸುಮಾರು ಒಂದು ಘಂಟೆಯವರೆಗೆ ನಿಂತಿತ್ತು. ಇದು ರಸ್ತೆ ನಿಯಮವನ್ನು ಉಲ್ಲಂಘನೆ ಮಾಡಿದಂತಲ್ಲವೆ. ಆದರೂ ಸಂಚಾರಿ ಪೊಲೀಸರು ವಾಹನ ಚಾಲಕನ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲವೇಕೆ ಎಂದು ಪ್ರಶ್ನಿಸಿದರು.

ಕೋರ್ಟ್ ಕಲಾಪ ಬಹಿಷ್ಕರಿಸಿ ಪ್ರತಿಭಟನೆ:
ಕೇಂದ್ರ ಸರ್ಕಾರದ ಈ ನೂತನ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯಿಂದ ಜನಸಾಮಾನ್ಯರಿಗೆ ತೊಂದರೆ ಆಗಿದೆ ಎಂದು ಅಥಣಿ ನಗರದ ವಕೀಲರ ಸಂಘ ಕೋರ್ಟ್ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದೆ. ವಕೀಲರ ಸಂಘದ ಅಧ್ಯಕ್ಷ ಕೆ ಎ ವನಜೋಳ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ವಕೀಲರಾದ ಸುನೀಲ ಸಂಖ, ಎಂ ಎಂ ಕೊಬ್ರಿ, ದಯಾನಂದ ವಾಘ್ಮೋರೆ, ಬಾಹುಸಾಹೇಬ ಕಾಂಬಳೆ, ಶಶಿ ಬಾಡಗಿ, ಪ್ರಮೋದ ಹಿರೇಮನಿ ಸೆರಿದಂತೆ ಇತರರು ಭಾಗಿಯಾಗಿದ್ದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا