Urdu   /   English   /   Nawayathi

ಗ್ವಾಲಿಯರ್ ನಲ್ಲಿ ಮಿಗ್ 21 ತರಬೇತಿ ಯುದ್ಧ ವಿಮಾನ ಪತನ

share with us

ಲಖನೌ: 25 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಗೆ ಸೇರಿದ ಮಿಗ್ 21 ಯುದ್ಧ ವಿಮಾನವೊಂದು ಪತನವಾಗಿದ್ದು, ಅದೃಷ್ಟವಶಾತ್ ವಿಮಾನದಲ್ಲಿದ್ದ ಪೈಲಟ್ ಗಳು ಸುರಕ್ಷಿತವಾಗಿ ಪಾರಾಗಿದ್ದಾರೆ. ಉತ್ತರ ಪ್ರದೇಶದ ಗ್ವಾಲಿಯರ್ ನಲ್ಲಿ ಈ ಘಟನೆ ನಡೆದಿದ್ದು, ಮಿಗ್ 21 ತರಬೇತಿ ಯುದ್ಧ ವಿಮಾನ ಪತನವಾಗಿದೆ. ಅದೃಷ್ಟವಶಾತ್ ಯುದ್ಧವಿಮಾನದಲ್ಲಿದ್ದ ಇಬ್ಬರು ಪೈಲಟ್ ಗಳು ಅಪಾಯದ ಮುನ್ಸೂಚನೆ ದೊರೆಯುತ್ತಿದ್ದಂತೆಯೇ ಎಮರ್ಜೆನ್ಸಿ ಇಜೆಕ್ಟ್ ವ್ಯವಸ್ಥೆ ಮೂಲಕ ವಿಮಾನದಿಂದ ಹೊರಗೆ ಜಿಗಿದು, ಪ್ಯಾರಾಚೂಟ್ ಮೂಲಕ ಕೆಳಗೆ ಇಳಿದಿದ್ದಾರೆ. ಈ ವೇಳೆ ಸ್ಥಳೀಯ ನಿವಾಸಿಗಳು ಪೈಲಟ್ ಗಳನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ. ಅಪಾಯದಿಂದ ಪಾರಾದ ಪೈಲಟ್ ಗಳು ಗ್ರೂಪ್ ಕ್ಯಾಪ್ಟನ್ ಮತ್ತು ಸ್ಕ್ರಾಡ್ರನ್ ಲೀಡರ್ ಹುದ್ದೆಯ ಅಧಿಕಾರಿಗಳಾಗಿದ್ದರು ಎಂದು ತಿಳಿದು ಬಂದಿದೆ. ಇನ್ನು ವಿಮಾನ ಪತನಕ್ಕೆ ಸಂಬಂಧಿಸಿದಂತೆ ವಾಯುಸೇನೆ ತನಿಖೆಗೆ ಆದೇಶಿಸಿದ್ದು, ತನಿಖೆ ಪೂರ್ಣಗೊಂಡ ಬಳಿಕ ವಿಮಾನ ಪತನಕ್ಕೆ ಕಾರಣ ತಿಳಿಯಲಿದೆ. ಇಂದಿನ ಅಪಘಾತವೂ ಸೇರಿದಂತೆ 2016ರಿಂದ ಈ ವರೆಗೂ ಭಾರತೀಯ ವಾಯುಸೇನೆ ಒಟ್ಟು 27 ವಿಮಾನಗಳನ್ನು ಅಪಘಾತದಲ್ಲಿ ಕಳೆದುಕೊಂಡಿದ್ದು, ಈ ಪೈಕಿ 15 ಯುದ್ಧ ವಿಮಾನಗಳೂ ಸೇರಿವೆ. ಈ ಪೈಕಿ  ಎಂದು ತಿಳಿದುಬಂದಿದೆ. 

ANI✔@ANI

Madhya Pradesh: MiG 21 Trainer aircraft of the Indian Air Force crashed in Gwalior, today. Both the pilots, including a Group Captain and a squadron leader, managed to eject safely.

View image on TwitterView image on Twitter

1,183

11:10 AM - Sep 25, 2019

Twitter Ads info and privacy

465 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا