Urdu   /   English   /   Nawayathi

ಎಟಿಎಂಗೆ ತುಂಬಿಸಬೇಕಾಗಿದ್ದ 99ಲಕ್ಷ ಹಣದೊಂದಿಗೆ ಚಾಲಕ ಎಸ್ಕೇಪ್..!

share with us

ಬೆಂಗಳೂರು: 28 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ನಗರದ ಐಸಿಐಸಿಐ ಬ್ಯಾಂಕ್ ಎಟಿಎಂಗಳಿಗೆ ಹಣ ತುಂಬುವ ಏಜೆನ್ಸಿಯ ವಾಹನದ ಚಾಲಕ 99.14 ಲಕ್ಷ ರೂ. ಹಣದೊಂದಿಗೆ ಪರಾರಿಯಾಗಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಸಂಜೆ ಐಸಿಐಸಿಐ ಬ್ಯಾಂಕ್ ಶಾಖೆಯೊಂದರ ಕ್ಯಾಶಿಯರ್ ಆನಂದ್ ಎಂಬುವರು ಎಟಿಎಂಗೆ ಹಣ ತುಂಬುವ ರೈಟರ್ಸ್ ಎಂಬ ಏಜೆನ್ಸಿ ವಾಹನದಲ್ಲಿ ಸುಮಾರು ಒಂದು ಕೋಟಿಗೂ ಅಧಿಕ ಮೊತ್ತವನ್ನು ಟ್ರಂಕ್‍ಗಳಲ್ಲಿಟ್ಟುಕೊಂಡು ವಿವಿಧ ಎಟಿಎಂಗಳಿಗೆ ಹಣ ತುಂಬಿ ನಂತರ ಕಮ್ಮನಹಳ್ಳಿ ಮುಖ್ಯರಸ್ತೆಯಲ್ಲಿರುವ ಐಸಿಐಸಿಐ ಎಟಿಎಂಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಏಜೆನ್ಸಿ ವಾಹನದ ಚಾಲಕ ಮಂಡ್ಯದ ಮೂಲದ ಪವನ್, ಸಿಬ್ಬಂದಿಗಳಾದ ರೆಡ್ಡಿಬಾಬು, ದಯಾನಂದ್, ಮುಖೇಶ್ ಸೇರಿಕೊಂಡು ಆನಂದ್ ಮೇಲೆ ಹಲ್ಲೆ ನಡೆಸಿ 20 ಲಕ್ಷ ಹಣವಿದ್ದ ಬಾಕ್ಸನ್ನು ಮಾತ್ರ ಸ್ಥಳದಲ್ಲೇ ಬಿಟ್ಟು ಉಳಿದ 99,14,800 ಹಣವಿದ್ದ ಟ್ರಂಕ್‍ಗಳೊಂದಿಗೆ ಪರಾರಿಯಾಗಿದ್ದಾರೆ. ತಕ್ಷಣ ಆನಂದ್ ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ವೈರ್‍ಲೆಸ್ ಮೂಲಕ ಎಲ್ಲಾ ಕಡೆ ಮಾಹಿತಿ ರವಾನೆ ಮಾಡಿ ನಾಕಾಬಂದಿ ಹಾಕಿ ತಪಾಸಣೆ ನಡೆಸುತ್ತಿದ್ದಾಗ ರೆಡ್ಡಿಬಾಬು, ದಯಾನಂದ್, ಮುಖೇಶ್ ವಾಹನದಿಂದ ಇಳಿದು ಪರಾರಿಯಾಗಲು ಯತ್ನಿಸಿದಾಗ ಬೆನ್ನಟ್ಟಿ ಹಿಡಿದಿದ್ದಾರೆ. ಆದರೆ, ವಾಹನದ ಚಾಲಕ ಪವನ್ ಹಣ ಸಮೇತ ವಾಹನದೊಂದಿಗೆ ಪರಾರಿಯಾಗಿದ್ದು, ಈ ನಡುವೆ ಎಚ್‍ಆರ್‍ಬಿಆರ್ ಲೇಔಟ್‍ನಲ್ಲಿ ವಾಹನ ಮಾತ್ರ ಪತ್ತೆಯಾಗಿದೆ. ಬಾಣಸವಾಡಿ ಠಾಣೆ ಪೆÇಲೀಸರು ಆರೋಪಿ ಪವನ್‍ಗಾಗಿ ಶೋಧ ಕೈಗೊಂಡಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا