Urdu   /   English   /   Nawayathi

ಗುಜರಾತ್ ನಲ್ಲಿ ಬಸ್ ಪಲ್ಟಿ ; ಮೂವರ ದುರ್ಮರಣ

share with us

ಅಹಮದಾಬಾದ್: 30 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಗುಜರಾತ್ನ ಬನಸ್ಕಾಂತ ಜಿಲ್ಲೆಯಲ್ಲಿನ ಅಂಬಾಜಿ ಪಟ್ಟಣದ ಸಮೀಪ ಸುಮಾರು 50 ಜನ ಪ್ರಯಾನಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಉರುಳಿಬಿದ್ದ ಪರಿಣಾಮ ಹಲವರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿನ ತ್ರಿಶುಲಿಯಾ ಘಾಟ್ ಭಾಗದಲ್ಲಿ ಸಂಚರಿಸುತ್ತಿದ್ದ ಈ ಐಶಾರಾಮಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸದ್ಯಕ್ಕೆ ಲಭಿಸಿರುವ ಮಾಹಿತಿಯಂತೆ ಮೂವರು ಸಾವಿಗೀಡಾಗಿದ್ದಾರೆ. ಆದರೆ ಬಸ್ಸು ಅಡಿಮೇಲಾಗಿ ಮಗುಚಿ ಬಿದ್ದಿರುವುದರಿಂದ ಬಸ್ಸಿನ ಅಡಿಯಲ್ಲಿ ಹಲವರು ಸಿಲುಕಿಕೊಂಡಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ. ಅಪಘಾತ ಸ್ಥಳಕ್ಕೆ ಆ್ಯಂಬುಲೆನ್ಸ್ ಮತ್ತು ಪೊಲೀಸರು ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇನ್ನು ಉರುಳಿಬಿದ್ದಿರುವ ಬಸ್ಸಿನ ಅಡಿಯಲ್ಲಿ ಸಿಲುಕಿಕೊಂಡಿರುವವರನ್ನು ರಕ್ಷಿಸುವ ಕಾರ್ಯದಲ್ಲಿ ಸ್ಥಳೀಯರು ಹಾಗೂ ಪೊಲೀಸರು ನಿರತರಾಗಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا