Urdu   /   English   /   Nawayathi

ಸರ್ಕಾರದ ವಿರುದ್ಧ ಸಿಡಿದೆದ್ದ ಜನರಿಂದ ಪ್ರತಿಭಟನೆ.. ಮೂರು ದಿನಕ್ಕೆ 34 ಮಂದಿ ಸಾವು

share with us

ಬಾಗ್ದಾದ್(ಇರಾಕ್): 06 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಇರಾಕ್​ ಜನತೆ ಕಳೆದ ಮೂರು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಂಡಿದೆ. ಭದ್ರತಾ ಸಿಬ್ಬಂದಿ ಮತ್ತು ಪ್ರತಿಭಟನಾಕಾರರ ನಡುವಣ ಘರ್ಷಣೆಗೆ ಇಲ್ಲಿಯವರೆಗೆ 34 ಜನ ಸಾವಿಗೀಡಾಗಿದ್ದಾರೆ.

ಇರಾಕ್ ಪ್ರಧಾನಿ ಅದಿಲ್ ಅಬ್ದುಲ್ ಮಹ್ದಿ ಅವರ ದುರ್ಬಲ ಸರ್ಕಾರದ ವಿರುದ್ಧ ಜನತೆ ರೊಚ್ಚಿಗೆದ್ದಿದ್ದಾರೆ. ಇರಾಕ್​ ಜನ ಭ್ರಷ್ಟಾಚಾರ, ನಿರುದ್ಯೋಗ, ಮೂಲ ಸೌಕರ್ಯಗಳ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧ ಜನ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇಲ್ಲಿಯವರೆಗೆ 34 ಜನ ಸಾವಿಗೀಡಾಗಿದ್ದು, ನಾಲ್ಕು ನೂರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಸೇರಿದಂತೆ 1,518 ಮಂದಿ ಗಾಯಗೊಂಡಿದ್ದಾರೆ. ಇರಾಕ್​ನ ದಕ್ಷಿಣ ನಗರಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದ್ದು, ಭಾರಿ ಭದ್ರತೆ ಕೈಗೊಳ್ಳಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا