Urdu   /   English   /   Nawayathi

ಮಾಜಿ ಸಚಿವ ಡಿಕೆ ಶಿವಕುಮಾರ್ ಅಪೊಲೊ ಆಸ್ಪತ್ರೆಗೆ ದಾಖಲು

share with us

ಬೆಂಗಳೂರು: 02 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಬೆನ್ನುನೋವು ಮತ್ತು ತೀವ್ರ ಆಯಾಸದ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿಕೆ ಶಿಅಕುಮಾರ್ ಶುಕ್ರವಾರ ಸಂಜೆ 6: 30 ಕ್ಕೆ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿ ಕೆಲ ಕಾಲ ವೈದ್ಯರ ಪರಿಶೀಲನೆಯಲ್ಲಿದ್ದ ಡಿಕೆಶಿ ಅವರನ್ನು ಸಧ್ಯ ಒಳರೋಗಿಗಳನ್ನಾಗಿ ದಾಖಲು ಮಾಡಿಕೊಳ್ಳಲಾಗಿದೆ. ಇದಕ್ಕೆ ಕೆಲ ದಿನಗಳ ಹಿಂದೆ ಶಿವಕುಮಾರ್ ನವದೆಹಲಿಯ ಜಾರಿ ನಿರ್ದೇಶನಾಲಯದ ವಶದಲ್ಲಿದ್ದಾಗ, ಅವರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.ಅಲ್ಲಿ ಅವರು ಎದೆ ನೋವು ಮತ್ತು ಅಸ್ವಸ್ಥತೆ ಕುರಿತು ದೂರು ಹೇಳಿದ್ದಲ್ಲದೆ ಆಂಜಿಯೋಗ್ರಾಮ್ ಗೆ ಸಹ ಒಳಗಾಗಿದ್ದರು.ಇಂದು ನಗರದಲ್ಲಿ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಕಳೆದ ಒಂದು ದಶಕದಿಂದಲೂ ಅವರಿಗೆ  ಥೈರಾಯ್ಡ್, ಅಧಿಕ ರಕ್ತದೊತ್ತಡ ಮತ್ತು ಹೈಪೊಗ್ಲಿಸಿಮಿಯಾ ಸಮಸ್ಯೆಗಳಿದೆ ಎಂದು ಶಿವಕುಮಾರ್ ಅವರ ಆಪ್ತ ಮೂಲಗಳು ತಿಳಿಸಿವೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا