Urdu   /   English   /   Nawayathi

ಯಡಿಯೂರಪ್ಪ, ಅಮಿತ್ ಶಾ ತಕ್ಷಣ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

share with us

ಬೆಂಗಳೂರು: 02 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ರಾಜ್ಯದ ಸಮ್ಮಿಶ್ರ ಸರ್ಕಾರ ಪತನವಾಗಲು ಬಿಜೆಪಿ ಕಾರಣ ಎಂಬುದು ಇದೀಗ ಸೋರಿಕೆಯಾಗಿರುವ ಅಡಿಯೊ, ವಿಡಿಯೊದಿಂದ ಬಹಿರಂಗವಾಗಿದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕೇಂದ್ರ ಗೃಹ ಸಚಿವರೂ ಆಗಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. 

Siddaramaiah@siddaramaiah

ನಮ್ಮ‌ ಪಕ್ಷದ ಶಾಸಕರಿಗೆ ಆಮಿಷಗಳನ್ನು ಒಡ್ಡಿ ಮುಂಬೈನ ಹೊಟೇಲ್‌ನಲ್ಲಿಟ್ಟು ಸರ್ಕಾರದ ಪತನಕ್ಕೆ ನೇರ ಕಾರಣರಾಗಿರುವ @AmitShah ಆಪರೇಷನ್ ಕಮಲ ಎಂಬ ಅಸಂವಿಧಾನಿಕ ಕಾರ್ಯಾಚರಣೆಯ ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು. @INCKarnataka

281

3:06 PM - Nov 2, 2019

Twitter Ads info and privacy

64 people are talking about this

ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಗೆ ಈ ಸಂಬಂಧ ಅರ್ಜಿ ಸಲ್ಲಿಸಲಾಗುವುದು ಎಂದರು. ಪ್ರಜಾಪ್ರಭುತ್ವ ಕಗ್ಗೊಲೆ ಆಗಿರುವುದಕ್ಕೆ ಬೇರೆ ಸಾಕ್ಷಿ ಬೇಡ, ಹೀಗಾಗಿ ಈ ಸರ್ಕಾರಕ್ಕೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವ ಹಕ್ಕು ಇಲ್ಲ ಎಂದರು.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا