Urdu   /   English   /   Nawayathi

'ಅಯೋಧ್ಯೆ ತೀರ್ಪಿನ ಬಗ್ಗೆ ಅನಗತ್ಯ ಹೇಳಿಕೆ ಬೇಡ': ಸಚಿವರಿಗೆ ಮೋದಿ ಕಟ್ಟಪ್ಪಣೆ

share with us

ನವದೆಹಲಿ: 07 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಅಯೋಧ್ಯೆ ಭೂವಿವಾದದ ಐತಿಹಾಸಿಕ ತೀರ್ಪು ಇನ್ನು ಕೆಲವೇ ದಿನಗಳಲ್ಲಿ ಹೊರಬೀಳಲಿದ್ದು, ಇದಕ್ಕೂ ಮುನ್ನ ಪ್ರಧಾನಿ ಮೋದಿ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಕಟ್ಟಪ್ಪಣೆಯೊಂದನ್ನು ಹೊರಡಿಸಿದ್ದಾರೆ. ಅಯೋಧ್ಯೆ ಭೂವಿವಾದ ಎರಡು ಕೋಮಿಗೆ ಸಂಬಂಧಿಸಿದ ಅತ್ಯಂತ ಸೂಕ್ಷ್ಮ ವಿಚಾರ. ಈ ಬಗ್ಗೆ ತೀರ್ಪಿನ ಮುನ್ನ ಅಥವಾ ನಂತರದಲ್ಲಿ ಅನಗತ್ಯ ಹೇಳಿಕೆಯನ್ನು ನೀಡಬಾರದು ಎಂದು ಸಚಿವರಿಗೆ ಪ್ರಧಾನಿ ಮೋದಿ ಆದೇಶ ಮಾಡಿದ್ದಾರೆ. ದೇಶದಲ್ಲಿ ಶಾಂತಿ, ಸಾಮರಸ್ಯವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಅನಗತ್ಯ ಹೇಳಿಕೆಗಳಿಂದ ಸಚಿವರುಗಳು ದೂರ ಇರಬೇಕು ಎಂದು ಮೋದಿ ಹೇಳಿದ್ದಾರೆ. ಅ.27ರ ಮನ್​​ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲೂ 2010ರಲ್ಲಿ ಅಲಹಾಬಾದ್ ತೀರ್ಪಿನ ಸಂದರ್ಭದಲ್ಲಿ ಸರ್ಕಾರ ಹಾಗೂ ಸಂಘಟನೆಗಳು ನಡೆದುಕೊಂಡ ರೀತಿಯನ್ನು ಶ್ಲಾಘಿಸಿದ್ದರು. 40 ದಿನಗಳ ನಿತ್ಯ ವಿಚಾರಣೆ ನಡೆದು ಸದ್ಯ ತೀರ್ಪನ್ನು ಕಾಯ್ದಿರಿಸಲಾಗಿದೆ. ನ.17ರಂದು ಸುಪ್ರೀಂಕೋರ್ಟ್​ ಹಾಲಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಕಾರ್ಯಾವಧಿ ಮುಕ್ತಾಯವಾಗಲಿದೆ. ಇದಕ್ಕೂ ಮುಂಚಿತವಾಗಿ ಐತಿಹಾಸಿಕ ತೀರ್ಪು ಪ್ರಕಟವಾಗಲಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا