Urdu   /   English   /   Nawayathi

ಬಾನೆತ್ತರಕ್ಕೆ ಚಿಮ್ಮುತ್ತಿರುವ ಕೊಳವೆ ಬಾವಿ ನೀರು: ಆಶ್ಚರ್ಯ ಚಕಿತರಾದ ನೋಡುಗರು!

share with us

ಬೆಂಗಳೂರು: 11 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಉಪಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಹಿನ್ನೆಲೆಯಲ್ಲಿ ಅನ್ಯಪಕ್ಷಗಳ ಕದ ತಟ್ಟುತ್ತಿರುವ ಭಿನ್ನಮತೀಯರನ್ನು ಪಕ್ಷದಿಂದ ಉಚ್ಛಾಟಿಸುವ ಮೂಲಕ ಬಿಜೆಪಿ ಪಕ್ಷ ವಿರೋಧಿಗಳಿಗೆ ಕಠಿಣ ಸಂದೇಶ ರವಾನಿಸಲು ಮುಂದಾಗಿದೆ. ಇದರ ಮೊದಲ ಭಾಗವಾಗಿ ಬೆಳಗಾವಿ ಜಿಲ್ಲೆಯ ಗೋಕಾಕ್‍ನ ಅಶೋಕ್ ಪೂಜಾರಿ ಹಾಗೂ ಕಾಗವಾಡದ ಮಾಜಿ ಶಾಸಕ ರಾಜು ಕಾಗೆ ಅವರುಗಳನ್ನು ಪಕ್ಷದಿಂದ ಪ್ರಾಥಮಿಕ ಸದಸ್ಯತ್ವದಿಂದಲೇ ಕಿತ್ತು ಹಾಕಲು ತೀರ್ಮಾನಿಸಲಾಗಿದೆ.ಈ ಮೂಲಕ ಟಿಕೆಟ್ ಸಿಗದಿದ್ದರೆ ಪಕ್ಷೇತರರಾಗಿ ಸ್ಪರ್ಧಿಸುತ್ತೇವೆ ಎಂದು ಸಡ್ಡು ಹೊಡೆಯುತ್ತಿರುವ ಭಿನ್ನಮತೀಯರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಬೇಕೆಂಬ ನಿರ್ಧಾರಕ್ಕೆ ವರಿಷ್ಠರು ಬಂದಿದ್ದಾರೆ. ನಿನ್ನೆಯಷ್ಟೇ ರಾಜು ಕಾಗೆ ಮತ್ತು ಅಶೋಕ್ ಪೂಜಾರಿ ಅವರುಗಳು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಇಂದು ಕಾಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದರು.  ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಪಕ್ಷವ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ರಾಜು ಕಾಗೆ ಮತ್ತು ಅಶೋಕ್ ಪೂಜಾರಿ ಅವರಿಗೆ ಪಕ್ಷದಿಂದಲೇ ಗೇಟ್‍ಪಾಸ್ ನೀಡಲಿದೆ ಎಂದು ತಿಳಿದುಬಂದಿದೆ. ಪಕ್ಷಕ್ಕಿಂತ ಯಾರೊಬ್ಬರೂ ದೊಡ್ಡವರಲ್ಲ. ಪಕ್ಷದಿಂದ ನಾಯಕರಾಗಿ ಬೆಳೆದಿದ್ದಾರೆ. ಅವರಿಂದ ಪಕ್ಷ ಬೆಳೆದಿಲ್ಲ. ವರಿಷ್ಠರ ಆದೇಶವನ್ನು ಧಿಕ್ಕರಿಸಿ ಚುನಾವಣೆಗೆ ಸ್ಪರ್ಧಿಸಿದರೆ ಅಂಥವರನ್ನು ಬಿಜೆಪಿ ಸಹಿಸಿಕೊಳ್ಳುವುದಿಲ್ಲ. ಹೀಗಾಗಿ ಕಾಗೆ ಮತ್ತು ಪೂಜಾರಿಗೆ ಉಚ್ಛಾಟನೆಯ ಬಿಸಿ ಮುಟ್ಟಿಸಿ ಭಿನ್ನಮತೀಯರು ಹಿಂದೆ ಸರಿಯುವಂತೆ ಕಾರ್ಯತಂತ್ರ ರೂಪಿಸಿದೆ. ಈಗಾಗಲೇ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಆಕಾಂಕ್ಷಿಯಾಗಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ ವರ ಪುತ್ರ ಶರತ್ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಬಿಜೆಪಿಗೆ ಸಡ್ಡು ಹೊಡೆದಿದ್ದಾರೆ. ಅವರನ್ನು ಮನವೊಲಿಸುವ ಪ್ರಯತ್ನಗಳು ವಿಫಲವಾಗಿವೆ. ಇದೇ 15ರಂದು ಪಕ್ಷೇತರ ಅಭ್ಯರ್ಥಿಯಾಗಿ ಹೊಸಕೋಟೆಯಿಂದ ಕಣಕ್ಕಿಳಿಯುವುದಾಗಿ ಶರತ್ ಬಚ್ಚೇಗೌಡ ಘೋಷಣೆ ಮಾಡಿದ್ದಾರೆ.

ಒಂದು ವೇಳೆ ಅವರು ಸ್ಪರ್ಧಾ ಕಣದಲ್ಲಿ ಉಳಿದಿದ್ದೇ ಆದರೆ ಅವರನ್ನು ಕೂಡ ಪಕ್ಷದಿಂದ ಉಚ್ಛಾಟಿಸುವ ತೀರ್ಮಾನಕ್ಕೆ ಬರಲಾಗಿದೆ. ಯಾವ ಯಾವ ಕ್ಷೇತ್ರಗಳಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದಾರೋ ಅಂಥವರನ್ನು ಮನವೊಲಿಸಬೇಕೆಂದು ವರಿಷ್ಠರು ಸೂಚನೆ ಕೊಟ್ಟಿದ್ದಾರೆ. ಮಾತುಕತೆಗೆ ಬಗ್ಗದೆ ಅಧಿಕೃತ ಅಭ್ಯರ್ಥಿ ವಿರುದ್ಧವೇ ಕಣಕ್ಕಿಳಿದರೆ ಉಚ್ಛಾಟಿಸದೆ ಬೇರೆ ದಾರಿ ಇಲ್ಲ ಎಂಬುದು ಬಿಜೆಪಿ ಲೆಕ್ಕಚಾರ. ವಿಜಯನಗರದಲ್ಲಿ ಗವಿಯಪ್ಪ, ಮಸ್ಕಿಯಲ್ಲಿ ಬಸವನಗೌಡ ತುರುವಿಹಾಳ, ಹಿರೇಕೆರೂರಿನಲ್ಲಿ ಯು.ಬಿ.ಬಣಕಾರ ಅವರುಗಳನ್ನು ಮನವೊಲಿಸುವಂತೆ ರಾಜ್ಯ ಸಮಿತಿಯು ಜಿಲ್ಲಾ ಅಧ್ಯಕ್ಷರುಗಳಿಗೆ ಸೂಚನೆ ಕೊಟ್ಟಿದೆ. ಮಾತುಕತೆಗೆ ಜಗ್ಗದೆ ಕಣದಲ್ಲಿ ಉಳಿದರೆ ಯಾರೇ ಆಗಲಿ ಮುಲಾಜಿಲ್ಲದೆ ಉಚ್ಛಾಟನೆ ಮಾಡಬೇಕೆಂದು ಹೈಕಮಾಂಡ್ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದೆ. ನಾಮಪತ್ರ ಹಿಂಪಡೆಯುವ ಕಡೆಯ ದಿನ(ನ.19)ದವರೆಗೂ ಕಾದು ನೋಡಿ ನಂತರ ಬಿಜೆಪಿ ಬ್ರಹ್ಮಾಸ್ತ್ರ ಬಳಸಲು ಸಜ್ಜಾಗಿದೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا