Urdu   /   English   /   Nawayathi

ಮಹಾರಾಷ್ಟ್ರ ಎಫೆಕ್ಟ್: ಅನರ್ಹ ಶಾಸಕರನ್ನು ಎತ್ತಿಕಟ್ಟಿ ಗೆಲುವು ಸಾಧಿಸಲು ಕಾಂಗ್ರೆಸ್ ಯತ್ನ

share with us

ಬೆಂಗಳೂರು: 25 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ಬಿಜೆಪಿ-ಎನ್'ಸಿಪಿ ಪಕ್ಷ ಸರ್ಕಾರ ರಚನೆ ಮಾಡಿದ್ದು, ಇದರ ಪರಿಣಾಮ ರಾಜ್ಯದ ಉಪಚುನಾವಣೆ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ. ಮಹಾರಾಷ್ಟ್ರ ರಾಜಕೀಯ ಪರಿಸ್ಥಿತಿಯನ್ನು ಬಳಸಿಕೊಂಡು, ಅನರ್ಹ ಶಾಸಕರ ವಿರುದ್ದ ಜನರ ಆಕ್ರೋಶ ಹೆಚ್ಚಿಸಿ, ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಯೋಜನೆ ರೂಪಿಸಿದೆ ಎಂದು ವರದಿಗಳು ತಿಳಿಸಿವೆ. ರಾತ್ರೋರಾತ್ರಿ ಬಿಜೆಪಿ ಸರ್ಕಾರ ರಚಿಸಿದ್ದನ್ನೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಲಾಭವಾಗಿ ಬಳಸಿಕೊಳ್ಳಲು ಮುಂದಾಗಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಬಿಜೆಪಿ ರಾತ್ರೋರಾತ್ರಿ ಮಹಾರಾಷ್ಟ್ರ ರಾಜ್ಯದಲ್ಲಿ ಅಸಂವಿಧಾನಿಕವಾಗಿ ಸರ್ಕಾರ ರಚನೆ ಮಾಡಿದೆ. ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ನನಗೆ ಆಶ್ಚರ್ಯವೇನೂ ತಂದಿಲ್ಲ. ಮಹಾರಾಷ್ಟ್ರದಲ್ಲಿಯೂ ಆಪರೇಷನ್ ಕಮಲ ವಿಸ್ತರಿಸಿದೆ. ದೇವೇಂದ್ರ ಫಡ್ನವೀಸ್ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುವ ಸಲುವಾಗಿ ಅಲ್ಲಿನ ನಾಯಕರಿಗೆ ಯಡಿಯೂರಪ್ಪ ವಾಸ್ತವ್ಯವಕ್ಕೆ ಜಾಗ ಕೊಟ್ಟರೂ ಅದು ಆಶ್ಚರ್ಯವೇನೂ ಇಲ್ಲ. ಇತ್ತೀಚಿನ ದಿನಗಳಲ್ಲಿ ಬಹುಮತದ ಅಗತ್ಯವೇ ಇಲ್ಲ. ಇಡಿ, ಇಸಿ, ಹಾಗೂ ಐಟಿ ಇಲಾಖೆಗಳು ಕೈಯಲ್ಲಿದ್ದರೆ ಸಾಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಾಷಪಡಿಸಿವುದು ಹೇಗೆ ಎಂಬುದು ಅವರಿಗೆ ಗೊತ್ತಿದೆ ಎಂದು ಹೇಳಿದ್ದಾರೆ. ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ಖಂಡಿತವಾಗಿಯೂ ರಾಜ್ಯದ ಉಪಚುನಾವಣೆ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಪ್ರಮುಖವಾಗಿ ಗಡಿ ಜಿಲ್ಲೆ ಬೆಳಗಾವಿಯ ಗೋಕಾಕ್, ಕಾಗವಾಡ, ಅಥಣಿಯಲ್ಲಂತೂ ಗಂಭೀರ ಪರಿಣಾಮ ಬೀರುತ್ತದೆ. ಬಿಜೆಪಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ಿದೆ. ಕೇಂದ್ರದ ಸಂಸ್ಥಗೆಳು, ದೇಶದ ರಾಷ್ಟ್ರಪತಿಗಳಿಂದ ರಾಜ್ಯಪಾಲರವರೆಗೂ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا