Urdu   /   English   /   Nawayathi

2018ರ ಘನಘೋರ ರೈಲು ದುರಂತ: ನ್ಯಾಯಕ್ಕಾಗಿ ಸಂತ್ರಸ್ತರ ಕುಟುಂಬಗಳ ಅಳಲು

share with us

ಪಂಜಾಬ್: 10 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಪಂಜಾಬ್ ರಾಜ್ಯ ಸರ್ಕಾರವು ನ್ಯಾಯ ಒದಗಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ 2018 ರ ರೈಲು ದುರಂತದ ಸಂತ್ರಸ್ತರ ಕುಟುಂಬಗಳು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ದುರಂತದಲ್ಲಿ ಮೃತರಾದ ಸಂತ್ರಸ್ತರ ರಕ್ತ ಸಂಬಂಧಿಗಳಿಗೆ ಸರ್ಕಾರಿ ನೌಕರಿ ನೀಡಬೇಕು ಹಾಗೂ ಪ್ರಕರಣದ ಆರೋಪಿಗಳಿಗೆ ಶಿಕ್ಷೆಯಾಗಬೇಕೆಂಬುದು ಪ್ರತಿಭಟನಾಕಾರರ ಬೇಡಿಕೆಯಾಗಿದೆ. ಈ ಘನಘೋರ ದುರಂತದ ಸಂಬಂಧ ಇದುವರೆಗೂ ಯಾವೊಬ್ಬ ಸರ್ಕಾರಿ ಅಧಿಕಾರಿಯೂ ಕೂಡ ನಮ್ಮನ್ನು ಸಂಪರ್ಕಿಸಿಲ್ಲ. ನಮಗೇನಾದರೂ ಆದರೆ ಅದಕ್ಕೆ ಸರ್ಕಾರವೇ ನೇರ ಹೊಣೆ. ಘಟನೆ ಜರುಗಿದಾಗ ನೀಡಿದ್ದ ಭರವಸೆಗಳನ್ನು ಪೂರೈಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಘಟನೆ ಹಿಂದೆ ಮೇಲ್ದರ್ಜೆಯ ಅಧಿಕಾರಿಗಳ ಪಾತ್ರ ಇರುವುದರಿಂದ ಪ್ರಕರಣವನ್ನು ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಕೊನೆಯ ಪಕ್ಷ ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸಚಿವರೊಬ್ಬರಾದರೂ ಬಂದು ಭರವಸೆ ನೀಡುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಘಟನೆಯ ವಿವರ:

2018ರ ಅಕ್ಟೋಬರ್ 19 ರಂದು ಅಮೃತಸರದ ಜೋದಾ ಫಟಾಕ್​ ​ಪ್ರದೇಶದ ಚೌರಾ ಬಜಾರ್‌ನ ಧೋಬಿ ಘಾಟ್ ಮೈದಾನದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿತ್ತು. ರಾಮಲೀಲ ಕಾರ್ಯಕ್ರಮದಲ್ಲಿ ರಾವಣನ ಪ್ರತಿಮೆಯ ದಹನವನ್ನು ವೀಕ್ಷಿಸುತ್ತಾ ರೈಲು ಹಳಿ ಮೇಲೆ ನಿಂತಿದ್ದವರ ಮೇಲೆ ನೋಡ ನೋಡುತ್ತಿದ್ದಂತೆಯೇ ವೇಗವಾಗಿ ಬಂದ ರೈಲು ಹರಿದುಹೋಗಿತ್ತು. ಅಪಘಾತದಲ್ಲಿ ಪುಟ್ಟ ಮಕ್ಕಳೂ ಸೇರಿದಂತೆ ಒಟ್ಟು 60 ಜನರು ಮೃತಪಟ್ಟಿದ್ದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا