Urdu   /   English   /   Nawayathi

ಉನ್ನಾವೋ ಅತ್ಯಾಚಾರ ಪ್ರಕರಣ: ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ದೋಷಿ!

share with us

ನವದೆಹಲಿ: 15 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) 2017ರ ಉನ್ನಾವೋ ಅಪ್ರಾಪ್ತೆಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ದೋಷಿ ಎಂದು ದೆಹಲಿ ತೀಸ್​ ಹಜಾರಿ ಕೋರ್ಟ್​​​ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಹಾಜರಾಗಲು ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸಂಚರಿಸುತ್ತಿದ್ದ ಕಾರಿಗೆ ಅಪಘಾತ ಮಾಡಿ ಆಕೆ ಹತ್ಯೆಗೆ ಸಂಚು ರೂಪಿಸಿದ ಗಂಭೀರ ಆರೋಪ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಮೇಲಿದ್ದು, ಸೆಂಗಾರ್​ರನ್ನು ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿರಿಸಲಾಗಿದೆ. ಡಿ. 5ರಂದು ಸಂತ್ರಸ್ತೆ ವಿಚಾರಣೆಗೆ ಹಾಜರಾಗಲೆಂದು ತೆರಳುತ್ತಿದ್ದ ಸಂದರ್ಭ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಪ್ರಕರಣದ ಆರೋಪಿಗಳು ಆಕೆಗೆ ಬೆಂಕಿ ಹಚ್ಚಿದ್ದು, ಚಿಕಿತ್ಸೆ ಫಲಿಸದೆ ಆಕೆ ಕೊನೆಯುಸಿರೆಳೆದಿದ್ದಳು.

ಪ್ರಕರಣ ಸಂಬಂಧ ಡಿಸೆಂಬರ್​ 16ಕ್ಕೆ ದೆಹಲಿ ಕೋರ್ಟ್‌ ತೀರ್ಪು ಕಾಯ್ದಿರಿಸಿತ್ತು. ಇದೀಗ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಇನ್ನು ಆರೋಪಿಗೆ ಡಿಸೆಂಬರ್​​ 19ರಂದು ಕೋರ್ಟ್​ ಶಿಕ್ಷೆಯ ಪ್ರಮಾಣ ವಿಧಿಸಲಿದೆ. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದ ಮತ್ತೋರ್ವ ಶಶಿ ಸಿಂಗ್​ ಅವರನ್ನ ನ್ಯಾಯಾಲಯ ಖುಲಾಸೆಗೊಳಿಸಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا