Urdu   /   English   /   Nawayathi

ಪಾಟ್ನಾದಲ್ಲಿ ಸಿಎಬಿ ವಿರೋಧಿ ಕಿಚ್ಚು: ಪೊಲೀಸ್ ಪೋಸ್ಟ್‌, ಬೈಕ್‌ಗಳಿಗೆ ಬೆಂಕಿ

share with us

ಪಾಟ್ನಾ(ಬಿಹಾರ್​): 15 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ರಾಜಧಾನಿ ಪಾಟ್ನಾದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ಬಿಸಿ ತಾರಕಕ್ಕೇರುತ್ತಿದೆ. ನೂತನ ಪೌರತ್ವ ಕಾನೂನನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರು ಕಲ್ಲು ತೂರಾಟ ನಡೆಸುತ್ತಿರುವುದಲ್ಲದೆ, ಅಲ್ಲಲ್ಲಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಾಟ್ನಾದ ಗಾಂಧಿ ಮೈದಾನದ ಕಾರ್ಗಿಲ್ ಚೌಕ್​ನಲ್ಲಿ ಸಾವಿರಾರು ಮಂದಿ ಪ್ರತಿಭಟನಾಕಾರರು ಪೌರತ್ವ ತಿದ್ದುಪಡಿ ಕಾನೂನನ್ನು ವಿರೋಧಿಸಿ ಬೀದಿಗಿಳಿದಿದ್ದಾರೆ. ಇದೇ ವೇಳೆ ಕೆಲ ದುಷ್ಕರ್ಮಿಗಳು ಪೊಲೀಸ್ ಪೋಸ್ಟ್‌ಗೆ ಹಾಗೂ ಅನೇಕ ಬೈಕ್‌ಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಸ್ಥಳದಲ್ಲೇ ಬಿಗುವಿನ ವಾತಾವರಣವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಒಂದೆಡೆ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನಪಡಿಸುವ ಕೆಲಸದಲ್ಲಿ ನಿರತರಾಗಿದ್ದರೆ, ಇನ್ನೊಂದೆಡೆ ಅಗ್ನಿಶಾಮಕ ದಳ ಸಿಬ್ಬಂದಿ ತಲುಪಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا