Urdu   /   English   /   Nawayathi

ದೆಹಲಿಯಲ್ಲಿ ನಿಲ್ಲದ ಪೌರತ್ವದ ಕಿಚ್ಚು: ಮಂಡಿ ಹೌಸ್​ನಲ್ಲಿ ಮತ್ತೆ ನಿಷೇಧಾಜ್ಞೆ ಜಾರಿ

share with us

ನವದೆಹಲಿ: 24 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ದೆಹಲಿಯ ಮಂಡಿ ಹೌಸ್​ ಪ್ರದೇಶದಲ್ಲಿ ಮತ್ತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೌರತ್ವ ಕಾಯ್ದೆ ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಹಲವೆಡೆ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಇನ್ನು ರಾಷ್ಟ್ರ ರಾಜಧಾನಿಯಲ್ಲೂ ಪ್ರತಿಭಟನೆ ಕಾವು ಹೆಚ್ಚಾಗಿದ್ದು, ಈ ಹಿನ್ನೆಲೆ ದೆಹಲಿಯ ಮಂಡಿ ಹೌಸ್​ ಪ್ರದೇಶದಲ್ಲಿ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ತಡೆಯುವ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಬಿಗಿ ಪೊಲೀಸ್​ ಬಂದೋಬಸ್ತ್​ ವ್ಯವಸ್ಥೆ ಕಲ್ಪಿಸಲಾಗಿದೆ.

ಡಿ.19 ರಂದು ದೆಹಲಿಯ ಕೆಂಪುಕೋಟೆ, ಮಂಡಿ ಹೌಸ್, ಜಂತರ್​ ಮಂತರ್​ನಲ್ಲಿ ​ಪ್ರತಿಭಟನೆ ಹಿನ್ನೆಲೆ ಹೇರಿ, ಇಂಟರ್​ನೆಟ್​ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಮಂಡಿ ಹೌಸ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ಸಂದೀಪ್ ದೀಕ್ಷಿತ್ ಅವರನ್ನು ಪೊಲೀಸರು ಬಂಧಿಸಿದ್ದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا