Urdu   /   English   /   Nawayathi

ದೆಹಲಿಯ ಕಾರ್ಖಾನೆಯಲ್ಲಿ ಬೆಂಕಿ ಅವಘಡ: 14 ಮಂದಿಗೆ ಗಾಯ, ಮುಂದುವರೆದ ರಕ್ಷಣಾ ಕಾರ್ಯ

share with us

ನವದೆಹಲಿ: 02 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಪಶ್ಚಿಮ ದೆಹಲಿಯ ಪೀರಾ ಗರ್ಹಿ ಪ್ರದೇಶದ ಕಾರ್ಖಾನೆಯೊಂದರಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಪೀರಾ ಗರ್ಹಿ ಪ್ರದೇಶದ ಒಕಯಾ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ 4.23 ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ 35 ಅಗ್ನಿಶಾಮಕ ದಳ ದೌಡಾಯಿಸಿದೆ. ಅಲ್ಲದೇ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಸ್ಫೋಟ ಸಂಭವಿಸಿದ್ದು, ಕಾರ್ಖಾನೆಯ ಕಟ್ಟಡದ ಕುಸಿದಿದೆ. ಇದರಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಹಲವಾರು ಜನರು ಸಿಲುಕಿದ್ದಾರೆಂದು ತಿಳಿದು ಬಂದಿದ್ದು, ಎನ್​ಡಿಆರ್​ಎಫ್​ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ 13 ಅಗ್ನಿಶಾಮಕ ದಳದ ಸಿಬ್ಬಂದಿಗಳೂ ಸೇರಿ 14 ಮಂದಿ ಗಾಯಗೊಂಡಿದ್ದಾರೆ. ಕಟ್ಟಡದ ಹಿಂಭಾಗ ಕುಸಿದಿದ್ದು, ಬೆಂಕಿ ಈಗ ನಿಯಂತ್ರಣಕ್ಕೆ ಬಂದಿದೆ ಎಂದು ಹೆಚ್ಚುವರಿ ಡಿಸಿಪಿ ರಾಜೇಂದ್ರ ಸಾಗರ್​ ತಿಳಿಸಿದ್ದಾರೆ.

ಇನ್ನು ಘಟನೆ ಕುರಿತು ಸಿಎಂ ಅರವಿಂದ್​ ಕೇಜ್ರಿವಾಲ್​ ಟ್ವೀಟ್​ ಮಾಡಿ ವಿಷಾದ ವ್ಯಕ್ತಪಡಿಸಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ತಿಳಿಸಿದ್ದಾರೆ.

ರೈಲ್ವೆ ನಿಲ್ದಾಣದಲ್ಲೂ ಬೆಂಕಿ: ನವದೆಹಲಿ ರೈಲ್ವೆ ನಿಲ್ದಾಣದ ವೇಟಿಂಗ್​ ರೂಂನಲ್ಲಿ ಸಹ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಗೆ ಸರಿಯಾದ ಕಾರಣ ತಿಳಿದು ಬಂದಿಲ್ಲ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا