Urdu   /   English   /   Nawayathi

ಮಂಗಳೂರು ಗೋಲಿಬಾರ್: ತನಿಖಾ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ 'ಹೈ' ಸೂಚನೆ

share with us

ಬೆಂಗಳೂರು: 16 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಮಂಗಳೂರು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿಯನ್ನು ಶೀಘ್ರಗತಿಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ. ಗೋಲಿಬಾರ್ ಪ್ರಕರಣ ಸಂಬಂಧ ಸಲ್ಲಿಕೆಯಾಗಿರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಹಾಹೂ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ, ಪ್ರಕರಣ ಸಂಬಂಧ ತನಿಳೆ ನಡೆಸಿರುವುದೇ ಆಗಿದ್ದರೆ, ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸುವಂತೆ ಸೂಚಿಸಿದೆ. ಅಲ್ಲದೆ  ಅರ್ಜಿದಾರರಿಗೆ ತಮ್ಮಸಾಮಾಜಿಕ ಕಾರ್ಯ ಚಟುವಟಿಕೆಗಳ ಕುರಿತು ವಿವರವಾದ ಮಾಹಿತಿ ಹಾಗೂ ಹತ್ಯೆಯಾದ ಇಬ್ಬರು ವ್ಯಕ್ತಿಗಳು ನಿರಪರಾಧಿಗಳು ಎಂದು ಹೇಗೆ ತೀರ್ಮಾನಕ್ಕೆ ಬಂದರು? ಎಂಬುದರ ಕುರಿತು ಮಾಹಿತಿ ನೀಡಿವಂತೆ ತಿಳಿಸಿದೆ. ಇದರಂತೆ ವಿಚಾರಣೆನ್ನು 2020ರ ಫೆಬ್ರವರಿ 4ಕ್ಕೆ ಮುಂದೂಡಿದೆ. ಡಿ.19ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದಿದ್ದ ಪ್ರತಿಭಟನೆ ಹಿಂಸಾಚಾರರೂಪ ಪಡೆದುಕೊಂಡಿತ್ತು. ಈ ವೇಳೆ ಪೊಲೀಸರು ಗೋಲಿಬಾರ್ ನಡೆಸಿದ್ದು, ಘಟನೆಯಲ್ಲಿ ಯುವಕರಿಬ್ಬರು ಸಾವನ್ನಪ್ಪಿದ್ದರು, ಅಲ್ಲದೆ, ಹಲವರಿಗೆ ಗಾಯಗಳಾಗಿದ್ದವು. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا