Urdu   /   English   /   Nawayathi

ದೆಹಲಿ ಚುನಾವಣೆ: ಸಿಎಂ ಕೇಜ್ರಿವಾಲ್ ವಿರುದ್ಧ 92 ಅಭ್ಯರ್ಥಿಗಳು ಕಣಕ್ಕೆ

share with us

ನವದೆಹಲಿ: 23 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಮುಂದಿನ ತಿಂಗಳ 8ರಂದು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ. ನವದೆಹಲಿ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಆಮ್ ಆದ್ಮಿ ಪಕ್ಷದ ಸಂಚಾಲಕ, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಚಕ್ ದೇ ಇಂಡಿಯಾ ಖ್ಯಾತಿಯ ನಟ ಹಾಗೂ ಕ್ಯಾಬ್ ಚಾಲಕರೊಬ್ಬರು ಸೇರಿದಂತೆ 92 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಈ ಪೈಕಿ ‘ಚಕ್ ದೇ ಇಂಡಿಯಾ’ ಸಿನಿಮಾ ಖ್ಯಾತಿಯ ಶೈಲೇಂದ್ರ ಸಿಂಗ್ ಶಲ್ಲಿ ಕೂಡ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಅವರು ಈಗ “ಅಂಜಾನ್ ಆದ್ಮಿ ಪಾರ್ಟಿ’ ಯ ಸದಸ್ಯ ಎಂದು ಹೇಳಿಕೊಂಡಿದ್ದು, ಚಕ್ ದೇ ಇಂಡಿಯಾ’ ಸಿನೆಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. 2009 ರಲ್ಲಿ ಬಸ್ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಪ್ರಯಾಣಿಕರನ್ನು ರಕ್ಷಿಸುವ ಮೂಲಕ ಸುದ್ದಿ ಯಾಗಿದ್ದರು. ನವದೆಹಲಿ ಕ್ಷೇತ್ರದಿಂದ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಒಟ್ಟು ಸ್ಪರ್ಧೆ 93 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಹಿಂಪಡೆಯಲು ನಾಳೆ ಕೊನೆಯ ದಿನವಾಗಿದೆ. ಹೀಗಾಗಿ ನಾಳೆ ಸಂಜೆ ಅಂತಿಮವಾಗಿ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಸಂಖ್ಯೆ ತಿಳಿಯಲಿದೆ. ಈವರೆಗೆ ಚುನಾವಣೆಗಾಗಿ 1,029 ಮಂದಿ ಅಭ್ಯರ್ಥಿಗಳು 1,528 ನಾಮಪತ್ರ ಸಲ್ಲಿಸಿದ್ದಾರೆಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا