Urdu   /   English   /   Nawayathi

'ಗುರುತೇ ಸಿಗುತ್ತಿಲ್ಲ': ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದ ಒಮರ್ ಅಬ್ದುಲ್ಲಾ ಫೋಟೋ!

share with us

ನವದೆಹಲಿ: 26 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ವಿಧಿ 370 ರದ್ಧತಿ ಬಳಿಕ ಗೃಹ ಬಂಧನದಲ್ಲಿದ್ದ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಅವರು ಅಪ್ಲೋಡ್ ಮಾಡಿರುವ ಚಿತ್ರ ಇದೀಗ ಇಂಟರ್ ನೆಟ್ ನಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಹೌದು. ಗೃಹ ಬಂಧನ ಬಳಿಕ ಇದೇ ಮೊದಲ ಬಾರಿಗೆ ಸಾಮಾಜಿಕ ಜಾಲತಾಣಗಳಿಗೆ ವಾಪಸ್ ಆಗಿರುವ ಒಮರ್ ಅಬ್ದುಲ್ಲಾ ತಮ್ಮ ಭಾವಚಿತ್ರವನ್ನು ಟ್ವಿಟರ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಅವರ ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಒಮರ್ ಅಬ್ದುಲ್ಲಾ ಅವರ ಚಿತ್ರ ನೋಡಿದ ಇತರೆ ರಾಜಕಾರಣಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ವೈರಲ್ ಆಗಿರುವ ಪೋಟೋದಲ್ಲಿ ಒಮರ್ ಬಿಳಿ ಗಡ್ಡ ಬಿಟ್ಟಿದ್ದಾರೆ. ಆದರೆ ಇದು ಯಾವಾಗ ತೆಗೆದ ಫೋಟೋ ಎಂಬುದನ್ನು ಒಮರ್ ಸ್ಪಷ್ಟಪಡಿಸಿಲ್ಲ. ಆದರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಅವರು ಇದನ್ನು ‘ದುರದೃಷ್ಟಕರ’ ಎಂದು ಕರೆದಿದ್ದು, ಒಮರ್ ಗುರುತೇ ಸಿಗುತ್ತಿಲ್ಲ ಎಂದು ಹೇಳಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಮಮತಾ 'ಈ ಚಿತ್ರದಲ್ಲಿ ನನಗೆ ಒಮರ್‌ನನ್ನು ಗುರುತಿಸಲು ಸಾಧ್ಯವಾಗಲಿಲ್ಲ. ದುಃಖವಾಗುತ್ತಿದೆ. ನಮ್ಮ ಪ್ರಜಾಪ್ರಭುತ್ವ ದೇಶದಲ್ಲಿ ಇದು ನಡೆಯುತ್ತಿರುವುದು ದುರದೃಷ್ಟಕರ. ಇದು ಯಾವಾಗ ಕೊನೆಗೊಳ್ಳುತ್ತದೆ? ಎಂದು ಟ್ವೀಟ್ ಮಾಡಿದ್ದಾರೆ.

Mamata Banerjee@MamataOfficial

I could not recognize Omar in this picture. Am feeling sad. Unfortunate that this is happening in our democratic country. When will this end ?

View image on Twitter

17.1K

5:31 PM - Jan 25, 2020

Twitter Ads info and privacy

8,642 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا