Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮೈಸೂರು: 27 ಜನುವರಿ 2020 (ಫಿಕ್ರೋಖಬರ್ ಸುದ್ದಿ) ದೆಹಲಿಯ ಜೆಎನ್ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಮೈಸೂರು ವಿವಿ ಆವರಣದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಫ್ರೀ ಕಾಶ್ಮೀರ್ ಫಲಕ ಹಿಡಿದು ದೇಶದ್ರೋಹದ ಪ್ರಕರಣ ಎದುರಿಸುತ್ತಿರುವ ಯುವತಿಯ ಪರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ನಲ್ಲಿ ಬೆಂಬಲ ನೀಡಿದ್ದಾರೆ.
ಮೈಸೂರಿನಲ್ಲಿ 'Free Kashmir' ಫಲಕ ಹಿಡಿದಿದ್ದ ಯುವತಿಯ ಪರ ನಾನು ವಕಾಲತ್ತು ವಹಿಸುತ್ತಿಲ್ಲ. ನನ್ನ ಲೈಸೆನ್ಸ್ ಅನ್ನು ಹಿಂದೆ ಅಮಾನತು ಮಾಡಿದ್ದರು. ಅಮಾನತು ತೆಗೆಯುವಂತೆ ಅರ್ಜಿ ಸಲ್ಲಿಸಿದ್ದೇನೆ.
ಯುವತಿಯ ಪರ ಯಾರೇ ವಕಾಲತ್ತು ವಹಿಸಿದರೂ ಅವರಿಗೆ ಬೆಂಬಲ ನೀಡುತ್ತೇನೆ. ಈ ಬಗ್ಗೆ ಗೊಂದಲ ಬೇಡ. 2/4
ಮೈಸೂರು ವಿವಿಯ ಕುವೆಂಪು ಪ್ರತಿಮೆ ಬಳಿ ಸಿಎಎ ವಿರೋಧಿಸಿ ನಡೆಯುತ್ತಿದ್ದ ಪಂಜಿನ ಮೆರವಣಿಗೆಯ ಸಂದರ್ಭದಲ್ಲಿ ಫ್ರೀ ಕಾಶ್ಮೀರ್ ಪೋಸ್ಟರ್ ಹಿಡಿದಿದ್ದ ನಳಿನಿ ಎಂಬ ಯುವತಿಯ ವಿರುದ್ಧ ದೇಶದ್ರೋಹದ ಆರೋಪದ ಪ್ರಕರಣ ಜಯಲಕ್ಷ್ಮಿಪುರಂ ಠಾಣೆಯಲ್ಲಿ ದಾಖಲಾಗಿತ್ತು. ನ್ಯಾಯಾಲಯದಿಂದ ಮಧ್ಯಂತರ ಜಾಮೀನು ಪಡೆದಿದ್ದ ಯುವತಿ ಪರ ಇಂದು ಮಧ್ಯಾಹ್ನ ಮೈಸೂರು ನ್ಯಾಯಾಲಯದಲ್ಲಿ ಜಾಮೀನು ಅರ್ಜಿಯ ವಿಚಾರಣೆ ಬರಲಿದ್ದು, ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯುವತಿ ಪರ ಯಾರೇ ವಕೀಲರು ವಕಾಲತ್ತು ನಡೆಸಿದರೂ ನನ್ನ ಬೆಂಬಲವಿದೆ ಎಂದು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಮೈಸೂರು ವಕೀಲರ ಸಂಘದಲ್ಲಿ ನನ್ನ ವಕೀಲ ವೃತ್ತಿಯ ಲೈಸನ್ಸ್ ನನ್ನು ಹಿಂದೆಯೇ ಅಮಾನತು ಮಾಡಿದ್ದಾರೆ. ಈ ಅಮಾನತನ್ನು ಹಿಂಪಡೆಯಲು ನಾನು ಅರ್ಜಿ ಸಲ್ಲಿಸಿದ್ದೇನೆ ಎಂದು ಸಿದ್ದರಾಮಯ್ಯ ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಆ ಮೂಲಕ ಮತ್ತೊಮ್ಮೆ ವಕೀಲ ವೃತ್ತಿಗೆ ಸಿದ್ದರಾಮಯ್ಯ ವಾಪಸ್ ಆಗುತ್ತಾರೆಯೇ ಎಂಬ ಪ್ರಶ್ನೆ ಮೂಡಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |