Urdu   /   English   /   Nawayathi

ಭೀಕರ ರಸ್ತೆ ಅಪಘಾತ... ಮಹಿಳೆ, ಮಗು ಸೇರಿ 12 ಮಂದಿ ದುರ್ಮರಣ!

share with us

ಇಸ್ಲಾಮಾಬಾದ್​: 15 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ಪಾಕಿಸ್ತಾನದಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ಓರ್ವ ಮಹಿಳೆ ಮಗು ಸೇರಿದಂತೆ 12 ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದ್ದು, 23 ಮಂದಿ ಗಾಯಗೊಂಡಿದ್ದಾರೆ. ಬಸ್​​ನಲ್ಲಿ ನೈರುತ್ಯ ಪಾಕಿಸ್ತಾನದ ಬಲೂಚಿಸ್ತಾನ್​ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ. ಅತಿ ವೇಗವಾಗಿ ಚಲಿಸುತ್ತಿದ್ದ ವೇಳೆ ವಾಹನ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ. ವಿವಾಹದ ಆರತಕ್ಷತೆಯಲ್ಲಿ ಭಾಗಿಯಾಗಿ ವಾಪಸ್​ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಜಿಲ್ಲಾಧಿಕಾರಿ ಶಾರ್ಜೀಲ್​​ ನೂರ್​ ತಿಳಿಸಿದ್ದಾರೆ. ಘಟನೆ ನಡೆದ ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದು, ಆಸ್ಪತ್ರೆಗೆ ರವಾನೆ ಮಾಡುತ್ತಿದ್ದಾಗ ಅಸುನೀಗಿದ್ದಾರೆ. ಗಾಯಗೊಂಡವರನ್ನ ಸಿಂಧ್​ನ ಲಾರ್ಕಾನ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا