Urdu   /   English   /   Nawayathi

ಭಾರತದೊಂದಿಗೆ ದೊಡ್ಡ ವ್ಯಾಪಾರ ಒಪ್ಪಂದದ ಮುನ್ಸೂಚನೆ ನೀಡಿದ್ರಾ ಟ್ರಂಪ್

share with us

ವಾಷಿಂಗ್ಟನ್​​(ಅಮೆರಿಕ): 19 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದು, ಈ ಸಮಯದಲ್ಲಿ ಭಾರತದೊಂದಿಗೆ ದೊಡ್ಡದಾದ ವ್ಯಾಪಾರ ಒಪ್ಪಂದವೊಂದು ಕಾರ್ಯಸೂಚಿಯಲ್ಲಿರಬಹುದು, ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಸೂಚನೆ ನೀಡಿದ್ದಾರೆ. ನಾವು ಭಾರತದೊಂದಿಗೆ ಈಗಾಗಲೇ ವ್ಯಾಪಾರ ಒಪ್ಪಂದವನ್ನು ಹೊಂದಿದ್ದು, ಮುಂದಿನ ಅಧ್ಯಕ್ಷೀಯ ಚುನಾವಣೆಯ ಒಳಗೆ ಈ ಬಗ್ಗೆ ಮಾತುಕತೆ ನಡೆಸಲಿದ್ದೇವೆ ಎಂದು ಟ್ರಂಪ್​ ಅಮೆರಿಕ ಮಾಧ್ಯಮ ಪ್ರತಿನಿಧಿಗಳಲ್ಲಿ ಹೇಳಿದ್ದಾರೆ. ಫೆಬ್ರವರಿ 24 ರಂದು ಗುಜರಾತ್‌ನ ಅಹಮದಾಬಾದ್‌ನಲ್ಲಿನ ಮೊಟೆರಾ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮಕ್ಕೆ ಟ್ರಂಪ್​ ಆಗಮಿಸಲಿದ್ದು, ಈ ಕಾರ್ಯಕ್ರಮಕ್ಕೆ 1ಲಕ್ಷಕ್ಕೂ ಹೆಚ್ಚು ಜನ ಸಮೂಹ ಸೇರಲಿದೆ ಎಂದು ಟ್ರಂಪ್​​ ಅಭಿಪ್ರಾಯಪಟ್ಟಿದ್ದಾರೆ. ನಾನು ಮತ್ತು ಮೋದಿ ಉತ್ತಮ ಸ್ನೇಹಿತರಾಗಿದ್ದು, ಅವರ ವ್ಯಕ್ತಿತ್ವವನ್ನು ನಾನು ತುಂಬಾ ಇಷ್ಟಪಡುತ್ತೇನೆ. ಮೊಟೆರಾ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರೀಡಾಂಗಣವಾಗಲಿದ್ದು, ಇದರ ಉದ್ಘಾಟನಾ ಕಾರ್ಯಕ್ರಮಕ್ಕೆ ತೆರಳುತ್ತಿರುವುದು ತುಂಬಾ ರೋಮಾಂಚನಕಾರಿಯಾಗಿರುವ ಸಂಗತಿ ಎಂದು ಟ್ರಂಪ್ ಸಂತಸ ವ್ಯಕ್ತಪಡಿಸಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا