Urdu   /   English   /   Nawayathi

ಮಹಿಳೆ ಹೆಸರಲ್ಲಿ ಫೇಸ್​ಬುಕ್ ಖಾತೆ ತೆರೆದು ಅಶ್ಲೀಲ ವಿಡಿಯೋ, ಪೋಟೋ ಅಪ್ಲೋಡ್ ಮಾಡುತ್ತಿದ್ದ ಆರೋಪಿ ಅಂದರ್

share with us

ರಾಯಚೂರು: 23 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್​​ಬುಕ್​​​ ಖಾತೆ ಸೃಷ್ಟಿಸಿ ಅಶ್ಲೀಲ ಪೋಟೋ ಹಾಗೂ ವಿಡಿಯೋಗಳನ್ನ ಅಪ್ಲೋಡ್​ ಮಾಡುತ್ತಿದ್ದ ಆರೋಪಿಯನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಸಿರವಾರ ತಾಲೂಕಿನ ಮುರಕಿಗುಡ್ಡಾ ಗ್ರಾಮದ ಯುವಕ ಅಮರೇಶನನ್ನ ಬಂಧಿಸಿದ್ದು, ವಿಡಿಯೋ, ಪೋಟೋ ಅಪ್ಲೋಡ್ ಮಾಡಲು ಬಳಸುತ್ತಿದ್ದ ಮೊಬೈಲ್ ಹಾಗೂ ಸಿಮ್ ಕಾರ್ಡ್ ಜಪ್ತಿ ಮಾಡಿಕೊಂಡಿದ್ದಾರೆ. ಸಿರವಾರ ತಾಲೂಕಿನ ಮಹಿಳೆಯೊಬ್ಬರ ಹೆಸರಿನಲ್ಲಿ ಫೇಸ್ ಬುಕ್ ನಲ್ಲಿ ಖಾತೆ ತೆರೆಯಲಾಗಿತ್ತು. ಇದೇ ಹೆಸರಿನಲ್ಲಿ ಫೇಸ್ ಬುಕ್​ಗೆ ಆಶ್ಲೀಲ ಪೋಟೋ, ವಿಡಿಯೋಗಳನ್ನ ಅಪ್ಲೋಡ್ ಮಾಡುತ್ತಿದ್ದರು. ಈ ಕುರಿತಂತೆ ಸಿಇಎನ್ ವಿಭಾಗದ ಠಾಣೆಯಲ್ಲಿ ದೂರು ಸಲ್ಲಿಸಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿಯ ಜಾಡು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಅಲ್ಲದೇ ಬಂಧಿತ ಆರೋಪಿಗೆ ರಾಜು ಪವಾರ ಸಹಾಯ ಮಾಡುತ್ತಿದ್ದು, ಈ ಆರೋಪಿಯ ಸೆರೆಗೆ ಪೊಲೀಸರು ಬಲೆ ಬಿಸಿದ್ದಾರೆ. ಜಿಲ್ಲೆಯ ಸಿಇಎನ್ ವಿಭಾಗದ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا