Urdu   /   English   /   Nawayathi

ಕಮಲ್​ನಾಥ್​ ಸರ್ಕಾರದ ಕಾರ್ಯವೈಖರಿಯಿಂದ ಬೇಸರ... 'ಕೈ' ಬಿಟ್ಟು 'ಕಮಲ' ಮುಡಿದಿರುವೆ ಎಂದ ಶಾಸಕ!

share with us

ಭೋಪಾಲ್​: 10 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ಮಧ್ಯಪ್ರದೇಶದಲ್ಲಿನ ರಾಜಕೀಯ ಹೈಡ್ರಾಮಾ ಕ್ಷಣ ಕ್ಷಣಕ್ಕೂ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಕಾಂಗ್ರೆಸ್​ನ 19 ಶಾಸಕರು ಈಗಾಗಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಜ್ಯೋತಿರಾದಿತ್ಯ ಸಿಂಧಿಯಾ ಕೂಡ ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಸಲ್ಲಿಕೆ ಮಾಡಿದ್ದಾರೆ.

CongressMLA's

ರಾಜೀನಾಮೆ ನೀಡಿದ ಕಾಂಗ್ರೆಸ್​ ಶಾಸಕರು

ರಾಜೀನಾಮೆ ನೀಡಿರುವ 19 ಶಾಸಕರ ಪೈಕಿ ಓರ್ವ ಬಿಸಾಹು ಲಾಲ್ ಸಾಹು ಮಾತನಾಡಿದ್ದು, ಈಗಾಗಲೇ ನಾನು ಕಾಂಗ್ರೆಸ್​ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನಸಭೆಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿರುವೆ. ಬರುವ ದಿನಗಳಲ್ಲಿ ಕಾಂಗ್ರೆಸ್​​ನ ಇನ್ನೂ ಹಲವು ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರಿಕೊಳ್ಳಲಿದ್ದು, ಮಧ್ಯಪ್ರದೇಶದಲ್ಲಿ ಕಮಲ್​ನಾಥ್​​ ಸರ್ಕಾರದ ಆಡಳಿತದಿಂದ ಅವರು ಬೇಸರಗೊಂಡಿದ್ದಾರೆ ಎಂದಿದ್ದಾರೆ. ಇದೇ ವೇಳೆ ಮಾತನಾಡಿರುವ ಬಿಜೆಪಿ ಮುಖಂಡ ಶಿವರಾಜ್​ ಸಿಂಗ್​ ಚೌಹಾಣ್​, ಕಾಂಗ್ರೆಸ್​ ಮುಖಂಡ ಹಾಗೂ ಹಿರಿಯ ಶಾಸಕ ಬಿಸಾಹು ಜೀ ಬಿಜೆಪಿ ಸೇರ್ಪಡೆಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿರುವ 6 ಮಂದಿ ಸಚಿವರು ಸೇರಿದಂತೆ ಕಾಂಗ್ರೆಸ್​​ನ 19​ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا