Urdu   /   English   /   Nawayathi

ಮಧ್ಯಪ್ರದೇಶದಲ್ಲಿ ಮುಗಿಯದ ರಾಜಕೀಯ ಹೈಡ್ರಾಮ: ಹೋಗುತ್ತೇವೆ, ಹೋಗುತ್ತೇವೆಂದು ಬೆಂಗಳೂರಿನಲ್ಲೇ ಉಳಿದ ರೆಬೆಲ್ಸ್'ಗಳು

share with us

ಬೆಂಗಳೂರು: 14 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ಕಾಂಗ್ರೆಸ್ ಪಕ್ಷದ 22 ಶಾಸಕರ ರಾಜೀನಾಮೆಯಿಂದಾಗಿ ಮಧ್ಯಪ್ರದೇಶದಲ್ಲಿ ಕಂಡುಬಂದಿರುವ ರಾಜಕೀಯ ಹೈಡ್ರಾಮ ಶುಕ್ರವಾರ ಕೂಡ ಮುಂದುವರೆದಿತ್ತು. ಒಂದೆಡೆ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವಸು ರಾಜ್ಯಪಾಲ ಲಾಲಾಜಿ ಟಂಡನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ, ಮತ್ತೊಂದೆಡೆ ನಗರದ ರೆಸಾರ್ಟ್ ನಲ್ಲಿ ಉಳಿದುಕೊಂಡಿರುವ ಬಂಡಾಯ ಶಾಸಕರು ಇನ್ನೇನೂ ಭೂಪಾಲ್'ಗೆ ಹೊರಟೇ ಬಿಡುತ್ತಿದ್ದಾರೆಂದುಕೊಳ್ಳುತ್ತಿದ್ದಂತೆಯೇ ಕೊನೇ ಕ್ಷಣದಲ್ಲಿ ಹೋಗುವುದಿಲ್ಲ ಎಂದು ಹೇಳಿ ಬೆಂಗಳೂರಿನಲ್ಲಿಯೇ ಉಳಿದುಕೊಂಡಿದ್ದಾರೆ. ರಾಜ್ಯಪಾಲರನ್ನು ಭೇಟಿ ಮಾಡಿದ ಕಮಲ್ ನಾಥ್ ಅವರು, ಬಿಜೆಪಿ ವಿರುದ್ಧ ಮೂರು ಪುಟಗಳ ದೂರು ನೀಡಿದ್ದಾರೆ. ಅಲ್ಲದೆ, ಬಿಜೆಪಿ ನಾಯಕರು ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆಂದು ಆರೋಪಿಸಿದ್ದಾರೆ. ಬಿಜೆಪಿ ಕೂಡಿ ಹಾಕಿ ಶಾಸಕರ ಬಿಡುಗಡೆಗೆ ಮಧ್ಯಪ್ರವೇಶಿಸಬೇಕು. ಬಹುಮತ ಸಾಬೀತು ಪಡಿಸಲು ನಾನು ಸಿದ್ಧನಿದ್ದೇನೆಂದು ಹೇಳಿದ್ದಾರೆ. ಅಲ್ಲದೆ, ಬಂಡಾಯ ಶಾಸಕರ ಪೈಕಿ ಇರುವ 6 ಸಚಿವರನ್ನು ಸಂಪುಟದಿಂದ ವಜಾಮಾಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ರಾಜ್ಯಪಾಲರು ಧನಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ. 

ಈ ನಡುವೆ ರಾಜೀನಾಮೆ ನೀಡಿದ ಶಾಸಕರು ಶುಕ್ರವಾರ ಖುದ್ದಾಗಿ ಹಾಜರಾಗಿ ಹೇಳಿಕೆ ನೀಡಬೇಕೆಂದು ಸ್ಪೀಕರ್ ನೋಟಿಸ್ ನೀಡಿದ್ದು, ನೋಟಿಸ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಉಳಿದುಕೊಂಡಿರುವ ಮಧ್ಯಪ್ರದೇಶ ಶಾಸಕರು ಭೂಪಾಲ್'ಗೆ ತೆರಳಲು ಸಿದ್ಧರಾಗಿದ್ದರು. ಇದರಂತೆ ನಗರಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ. ನಡ್ಡಾ ಅವರನ್ನೂ ಕೂಡ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ವಿಮಾನ ನಿಲ್ದಾಣದಲ್ಲಿಯೇ ನಡ್ಡಾ ಅವರನ್ನು ಭೇಟಿಯಾದ ನಾಯಕರು ಮಾತುಕತೆ ನಡೆಸಿದ್ದರು. ಇದಾದ ಕೆಲ ಸಮಯದ ಬಳಿಕ ಭೋಪಾಲ್'ಗೆ ತೆರಳುವುದಿಲ್ಲ ಎಂದು ಹೇಳಿ, ವಿಮಾನ ನಿಲ್ದಾಣದಿಂದ ಮತ್ತೆ ಬೆಂಗಳೂರಿನ ರೆಸಾರ್ಟ್'ನತ್ತ ಹೆಜ್ಜೆ ಹಾಕಿದರು. ಇನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಬಿಜೆಪಿ ನಾಯಕರ ವಿರುದ್ಧ ಆರೋಪ ಮಾಡಿದ್ದು, ನಗರದ ಹೊರವಲಯದ ರೆಸಾರ್ಟ್'ನಲ್ಲಿರುವ ಮಧ್ಯಪ್ರದೇಶದ ಶಾಸಕ ಮನೋಜ್ ಚೌಧರಿ ಅವರನ್ನು ಭೇಟಿ ಮಾಡಲು ಆಗಮಿಸಿದ್ದ ಅವರ ತಂದೆ ನಾರಾಯಣ ಚೌಧರಿ ಮೇಲೆ ಪೊಲೀಸರು ಗೂಂಡಾಗಿರಿ ನಡೆಸಿದ್ದಾರೆಂದು ಹೇಳಿದ್ದಾರೆ. ಮಧ್ಯಪ್ರದೇಶದ ಶಿಕ್ಷಣ ಸಚಿವ ಜೀತೂ ಪಟ್ವಾರಿ ಹಾಗೂ ಶಾಸಕ ಮನೋಜ್ ಚೌಧರಿ ಅವರ ತಂದೆ ನಾರಾಯಣ ಚೌಧರಿ ಅವರು ನಗರದ ಹೊರವಲಯದಲ್ಲಿರುವ ರೆಸಾರ್ಟ್ನಲ್ಲಿರುವ ಶಾಸಕ ಮನೋಜ್ ಚೌಧರಿಯನ್ನು ಭೇಟಿ ಮಾಡಲು ಬೆಂಗಳೂರಿಗೆ ಆಗಮಿಸಿದ್ದಾರೆ. ಶಾಸಕರ ಭೇಟಿಗೆ ಹೋದ ಸಂದರ್ಭದಲ್ಲಿ ಪೊಲೀಸರು ಮಧ್ಯಪ್ರದೇಶದ ಶಿಕ್ಷಣ ಸಚಿವರು ಮತ್ತು ಶಾಸಕರು ತಂದೆಯನ್ನು ಎಳೆದಾಡಿದ್ದಾರೆ. ಭೇಟಿಗೆ ಅವಕಾಶವನ್ನು ನೀಡಿಲ್ಲ ಎಂದು ಆರೋಪಿಸಿದ್ದಾರೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا